11:28 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಜೆಪಿ ಮುಖಂಡ ಸತೀಶ್ ಪ್ರಭು ಸಹಿತ 4 ಮಂದಿ ಕಾಂಗ್ರೆಸ್ ಸೇರ್ಪಡೆ: ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

07/05/2023, 22:23

ಮಂಗಳೂರು(reporter Karnataka.com): ಬಿಜೆಪಿ ಮುಖಂಡ ಸತೀಶ್ ಪ್ರಭು ಸೇರಿದಂತೆ ನಾಲ್ವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಹಾಗೂ ನಾನಾ ಸಂಘಟನೆಯಲ್ಲಿ ಸುಮಾರು 3 ದಶಕಗಳ ಕಾಲ ಸೇವೆ ಮಾಡಿದ ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಬಿಜೆಪಿಯಲ್ಲಿ ಪಕ್ಷಾಂತರ ಸುನಾಮಿ ಆರಂಭವಾಗಿದ್ದು, ಈವರೆಗೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಸೇರಿದಂತೆ 47 ಮಂದಿ ಹಿರಿಯ ನಾಯಕರು ಹಾಗೂ 6 ಮಂದಿ ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಪಕ್ಷ ಸೇರ್ಪಡೆ ಮಾಡಿದ್ದಾರೆ. ಇದರಿಂದ ಬಿಜೆಪಿ ಮುಳುಗುತ್ತಿರುವ ಹಡಗಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಈ ರಾಜ್ಯದಲ್ಲಿ ಆಡಳಿತ ನಡೆಸಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ರಥಬೀದಿ ವೆಂಕಟರಮಣ ದೇವಳದ ಟ್ರಸ್ಟಿ ಹಾಗೂ ಬಿಜೆಪಿ ಮುಖಂಡ ಸತೀಶ್ ಪ್ರಭು ಅವರು 30 ವರ್ಷಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಿಜೆಪಿ ಯುವಮೋರ್ಚಾ, ದ.ಕ. ಜಿಲ್ಲಾ ಬಿಜೆಪಿಯಲ್ಲಿ ಜವಾಬ್ದಾರಿ ವಹಿಸಿಕೊಂಡವರು. ಇಂತಹ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಹೆಮ್ಮೆಯೆನಿಸುತ್ತಿದೆ. ಇವರ ಜತೆ ಸಂತೋಷ್ ಶೆಟ್ಟಿ, ರಾಜೇಶ್ ಕಾಮತ್, ರಜತಾ ಆರ್. ಕಾಮತ್ ಹಾಗೂ ದೀಕ್ಷಾ ಕಾಮತ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.
ಜನಹಿತ ಸಾಧನೆಗೆ ಕಾಂಗ್ರೆಸ್ ಸೇರ್ಪಡೆ: ನಾನು ಸುಮಾರು ವರ್ಷಗಳಿಂದ ಸಂಘಪರಿವಾರ, ಬಿಜೆಪಿ ಜತೆ ಗುರುತಿಸಿಕೊಂಡಿದ್ದು, ನಾನಾ ಜವಬ್ದಾರಿ ವಹಿಸಿಕೊಂಡಿದ್ದೆ. ಆದರೆ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಜನಹಿತ ಸಾಧನೆ ಗೌಣವಾಗುತ್ತಿದ್ದು, ಇದರಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಸತೀಶ್ ಪ್ರಭು ಹೇಳಿದರು.
ನಾನು ಯಾವುದೇ ಅಧಿಕಾರ, ಹುದ್ದೆಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಈ ಜಿಲ್ಲೆಯಲ್ಲಿ ನಮ್ಮ ಹಿರಿಯರು ಕಾಂಗ್ರೆಸ್‌ನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದು, ಆ ನಿಟ್ಟಿನಲ್ಲಿ ಗತವೈಭವ ಮರಳಿ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕಾಂಗ್ರೆಸ್ ಮುಖಂಡರಾದ ಪಿ.ವಿ. ಮೋಹನ್, ಲಾವಣ್ಯ ಬಲ್ಲಾಳ್, ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ಪ್ರಕಾಶ್ ಸಾಲ್ಯಾನ್, ನವೀನ್ ಡಿಸೋಜ, ದ.ಕ. ಯುವಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ತೇಜಸ್ವಿರಾಜ್, ಡೆನ್ನಿಸ್ ಡಿಸಿಲ್ವಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು