10:39 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಿಜೆಪಿ ಮುಖಂಡನ ದಾದಾಗಿರಿ: ಗದ್ದೆಯಲ್ಲಿ ನೀರು ನಿಲ್ಲುತ್ತದೆಯೆಂದು ರಸ್ತೆಯನ್ನೇ ಅಗೆದ ಜಿಪಂ ಮಾಜಿ ಸದಸ್ಯ!

30/08/2022, 23:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಅಂತ ಬಿಜೆಪಿ ಮುಖಂಡರೊಬ್ಬರು ರಸ್ತೆಯನ್ನೇ ಅಗೆದು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೆಗುಣಶಿ- ಯಬರಟ್ಟಿ ಗ್ರಾಮದಲ್ಲಿ ನಡೆದಿದೆ.

ಪೈಪ್ ಲೈನ್ ಬ್ಲಾಕ್ ಆಗಿದ್ದಕ್ಕೆ ಕಳೆದ ಒಂದು ವಾರದ ಹಿಂದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಮ್ಮಣ್ಣ ತೇಲಿ ರಸ್ತೆ ಅಗೆದಿದ್ದರು. ಜಿಲ್ಲಾ ಪಂಚಾಯಿತಿನ ಮಾಜಿ ಸದಸ್ಯನ ಅಂಧಾ ದರ್ಬಾರ್ ಗೆ ಸ್ಥಳೀಯರು ಬೆಚ್ಚಿ ಹೋಗಿದ್ದಾರೆ.

ತಮ್ಮಣ್ಣ ಅವರು ಶೇಗುಣಶಿ – ಯಬರಟ್ಟಿ ಸಂಪರ್ಕ ‌ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆ ಅಗೆದಿದ್ದರು.

ನೀರು ಪಾಸ್ ಆಗಲೆಂದು ಕೆಳಗೆ ಪೈಪ್ ಲೈನ್ ಅವಳವಡಿಸಿ ಅಧಿಕಾರಿಗಳು ಮೇಲೆ ರಸ್ತೆ ‌ಮಾಡಿದ್ದರು. ಯಾರೋ ಕಿಡಿಗೇಡಿಗಳು ಪೈಪ್ ಒಳಗೆ ಕಲ್ಲು ಹಾಕಿದ್ದರಿಂದ ಪೈಪ್ ಲೈನ್ ಬ್ಲಾಕ್ ಆಗಿತ್ತು.

ಪೈಪ್ ಲೈನ್ ಬ್ಲಾಕ್ ಆಗಿದ್ದಕ್ಕೆ ಕಳೆದ ಒಂದು ವಾರದ ಹಿಂದೆ ತಮ್ಮಣ್ಣ ರಸ್ತೆ ಅಗೆದಿದ್ದರು.


ತಮ್ಮಣ್ಣನ ನಡೆಯಿಂದ ಎರಡೂ ಗ್ರಾಮದ ಜನರು ಬೇಸತ್ತು ಹೋಗಿದ್ದಾರೆ. ಶೆಗುಣಶಿ ಹಾಗೂ ಯಬರಟ್ಟಿ ಗ್ರಾಮಗಳ ಜನರು ಕಳೆದ ಒಂದು ವಾರದಿಂದ ಸಂಪರ್ಕ ಸಾಧ್ಯವಾಗದೆ ಪರದಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು