9:15 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಿಜೆಪಿ ನಡೆಸುವ ಸೌಜನ್ಯ ಪರ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ: ಡಿವೈಎಫ್ ಐ ಪ್ರಶ್ನೆ

24/08/2023, 21:57

ಮಂಗಳೂರು(reporterkarnataka.com): ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬಿದ ನಂತರ ಬಿಜೆಪಿ ಹೋರಾಟಕ್ಕಿಳಿದಿದೆ. ಬಿಜೆಪಿ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಪ್ರಶ್ನಿಸಿದ್ದಾರೆ. ಅವರು ಗುರುವಾರ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಆಗಸ್ಟ್ 28ರಂದು ಸೌಜನ್ಯ ಸಾವಿಗೆ ನ್ಯಾಯಕ್ಕೆ ಒತ್ತಾಯಿಸಿ ನಡೆಯಲಿರುವ ಬೆಳ್ತಂಗಡಿ ಚಲೋ ಬೆಂಬಲಿಸಿ ನಗರದಲ್ಲಿ ಜರುಗಿದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸೌಜನ್ಯ ಹತ್ಯೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎಡಪಂಥೀಯರು ನಿರಂತರ ಹೋರಾಟದಲ್ಲಿದ್ದಾರೆ. ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬುತ್ತಿರುವಾಗ ಬಿಜೆಪಿ ಹೋರಾಟದ ನಾಟಕ ಮಾಡುತ್ತಿದೆ. ಜಿಲ್ಲೆಯ ವಿದ್ಯಾರ್ಥಿ ಯುವಜನರು 28ರ ಬೆಳ್ತಂಗಡಿ ಚಲೋ ಹೋರಾಟ ಬೆಂಬಲಿಸಬೇಕೆಂದು ಕರೆ ನೀಡಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಸಾಮರಸ್ಯ ಸಂಘಟನೆಯ ಸಂಚಾಲಕಿ ಮಂಜುಳಾ ನಾಯಕ್ ಮಾತನಾಡಿದರು.
ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲರಾದ ನಿತಿನ್ ಕುತ್ತಾರ್, ನವೀನ್ ಕೊಂಚಾಡಿ, ರಫೀಕ್ ಹರೇಕಳ, ತಯ್ಯೂಬ್ ಬೆಂಗ್ರೆ, ಜಗದೀಶ್ ಬಜಾಲ್, ಭಾರತ ವಿದ್ಯಾರ್ಥಿ ಫೆಡರೇಶನ್ ನ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಪ್ರಥಮ್ ಬಜಾಲ್, ಮಾದುರಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು