8:50 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ ಬಸ್ಸಿಗೆ ಕಲ್ಲು ಹೊಡೆದಷ್ಟು ಸುಲಭವಲ್ಲ: ಶಾಸಕ ವೇದವ್ಯಾಸ ಕಾಮತ್

23/08/2024, 22:37

ಮಂಗಳೂರು(reporterjarnataka.com): ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದಿದ್ದವರು ನೀವು. ನಿಮ್ಮಂತಹವರ ಗೊಡ್ಡು ಬೆದರಿಕೆಗಳಿಗೆಲ್ಲ ಭಾರತ್ ಮಾತಾ ಕಿ ಜೈ ಎನ್ನುವ ದೇಶಭಕ್ತ ಬಿಜೆಪಿ ಪಡೆ ಹೆದರುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬನ್ನಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ಸಿಗೆ ಸವಾಲು ಹಾಕಿದರು.
ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರ ಮನೆಯಿಂದ ಜಿಲ್ಲಾ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಘೋಷಿಸಿದ್ದರಿಂದ ಶುಕ್ರವಾರ ಬೆಳಿಗ್ಗೆಯೇ ಪಿವಿಎಸ್ ಕಚೇರಿ ಬಳಿ ಬಿಜೆಪಿ ಶಾಸಕರುಗಳು, ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಇದು ಬಿಜೆಪಿ ಭದ್ರಕೋಟೆ. ಇಲ್ಲಿ ಕಾಂಗ್ರೆಸ್ಸಿನ ಪುಂಡರ ಬೆದರಿಕೆಗೆ ಜಗ್ಗುವವರು ಯಾರೂ ಇಲ್ಲ. ಇವರು ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ, ಸಾರ್ವಜನಿಕರ ಬಸ್ಸಿಗೆ ಕಲ್ಲು ಹೊಡೆದಷ್ಟು, ನಿರ್ಜೀವ ಟಯರಿಗೆ ಬೆಂಕಿ ಹಚ್ಚಿದಷ್ಟು ಸುಲಭವಲ್ಲ.ಬೇಕಿದ್ದರೆ ಒಮ್ಮೆ ಬಂದು ಪ್ರಯತ್ನಿಸಿ ನೋಡಲಿ, ವಿಶೇಷ ಚಪ್ಪಲಿಯ ಹಾರಗಳು ಅವರಿಗಾಗಿ ಸಿದ್ಧವಾಗಿವೆ ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮೋರ್ಚಾವೂ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮಧ್ಯಾಹ್ನದವರೆಗೂ ಕಾದರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಕಡೆ ಸುಳಿಯದೇ, ಕಂಕನಾಡಿವರೆಗೆ ಮಾತ್ರ ಪಾದಯಾತ್ರೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು