ಇತ್ತೀಚಿನ ಸುದ್ದಿ
BJP Protest | ರಾಜ್ಯಪಾಲರಿಗೆ ಅಪಮಾನ ಆರೋಪ: ಅಧಿವೇಶನದ ಮೊದಲ ದಿನವೇ ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿ ಪ್ರತಿಭಟನೆ
03/03/2025, 16:00

ಬೆಂಗಳೂರು(reporterkarnataka.com): ರಾಜ್ಯಪಾಲರಿಗೆ ನಿರಂತರವಾಗಿ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡುತ್ತಿದೆ ಎಂದು ಆರೋಪಿಸಿ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ ನಡೆಸಿತು.
ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ ಎಂದು ಪ್ರತಿಪಕ್ಣದ ನಾಯಕ ಆರ್. ಅಶೋಕ್ ಹೇಳಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಈ ಮಾತನ್ನು ಹೇಳುತ್ತಿದ್ದಾರೆ. ಇದರ ಜೊತೆಗೆ ಹಣ ಇಲ್ಲದೆ ಒಂದು ಲಕ್ಷ ಕೋಟಿ ರೂ.ಸಾಲ ಮಾಡಲಾಗುತ್ತಿದೆ. ಜನರ ಮೇಲೆ ತೆರಿಗೆ ಹೊರೆ ಹೇರಲಾಗುತ್ತಿದೆ. ಇದನ್ನು ಖಂಡಿಸಿ ಮಾರ್ಚ್ 7 ರಂದು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಾಗೂ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿ ಶಾಸಕರು ಉಪಸ್ಥಿತರಿದ್ದರು.