5:04 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಜೆಟ್‌ ಮಂಡನೆ ಮುಗಿಯುತ್ತಿದ್ದಂತೆ ಚೆಂಬು ಹಿಡಿದು ಬಿಜೆಪಿ ಪ್ರತಿಭಟನೆ

06/03/2026, 20:11

ಬೆಂಗಳೂರು(reporterkarnataka.com): ಮೂರು ಗಂಟೆ ಮೂವತ್ತು ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಶೂನ್ಯ ಬಜೆಟ್ ಎಂದು ಆರೋಪಿ ವಿಪಕ್ಷ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ ದ್ವಾರದವರೆಗೆ ಮೆರವಣಿಗೆ ಮಾಡಿದ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ರೈತರು, ಯುವ ಜನತೆ ಹಾಗೂ ಪರಿಶಿಷ್ಠ ಜಾತಿ, ಪಂಗಡ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾವುದೇ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ. ಇದೊಂದು ಶೂನ್ಯ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಯುವ ಜನತೆಗೆ ಮೋಸ ಮಾಡಿದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ… ರೈತರಿಗೆ, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಪಂಗನಾಮ ಹಾಕಿದ ಕಾಂಗ್ರೆಸ್ ಬಜೆಟ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು