9:49 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ; ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ: ಆರ್. ಅಶೋಕ್

05/02/2025, 17:15

ಬೆಂಗಳೂರು(reporterkarnataka.com):; ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹಿರಿಯರು ನೀಡಿದ ವಿರೋಧ ಪಕ್ಷದ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ನಾನೇನೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಇದಕ್ಕಾಗಿ ನಾನಂತೂ ಅರ್ಜಿ ಹಾಕಿಲ್ಲ. ಆ ಬಗ್ಗೆ ಯೋಚಿಸಿಯೇ ಇಲ್ಲ. ಆದರೆ ಈ ರೀತಿ ಸಮಸ್ಯೆಯಾಗಿರುವುದು ನನಗೂ ನೋವು ತಂದಿದೆ. ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗಿತ್ತು ಎಂದರು.
ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. ಕರ್ನಾಟಕದಲ್ಲಿ ಒಂದೇ ಕಡೆ ಬದಲಾವಣೆಯಾಗುತ್ತಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಪಕ್ಷದಲ್ಲಿ ಚುನಾವಣೆ ನಡೆಯುತ್ತಿದೆ. ಇಲ್ಲಿ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದರು.
ಪಕ್ಷದಲ್ಲಿ ಒಬ್ಬರು ಮತ್ತೊಬ್ಬರ ಮೇಲೆ ದೂರುವುದು ಬಹಳ ಬೇಸರ ಸಂಗತಿ. ರಾಷ್ಟ್ರೀಯ ನಾಯಕರು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲಿ ಎಲ್ಲರಿಗೂ ಅಭಿಪ್ರಾಯ ತಿಳಿಸುವ ಅವಕಾಶವಿದೆ. ಪಕ್ಷದಲ್ಲಿ ಇಂತಹ ಸಮಸ್ಯೆಗಳಿಂದಾಗಿ ಹಿನ್ನಡೆ ಉಂಟಾಗಿದೆ. ಕೆಲವೇ ದಿನಗಳಲ್ಲಿ ಇದು ಬಗೆಹರಿಯಲಿದೆ ಎಂದು ಅವರು ನುಡಿದರು.
ಆರ್‌ಎಸ್‌ಎಸ್‌ ರಾಜಕೀಯ ಪಕ್ಷವಲ್ಲ. ನಾನು ಅಲ್ಲಿಗೆ ಹೋಗಿ ಸಲಹೆ ನೀಡಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸುಳ್ಳು. ಅಂತಹ ವ್ಯವಸ್ಥೆ ಆರ್‌ಎಸ್‌ಎಸ್‌ನಲ್ಲಿ ಇಲ್ಲ. ನಾನು ಯಾರನ್ನೂ ಭೇಟಿ ಮಾಡಿಲ್ಲ. ರಾಜ್ಯಾಧ್ಯಕ್ಷರ ವಿಚಾರದಲ್ಲಿ ಪಕ್ಷದ ಹಿರಿಯ ನಾಯಕರು ಎಲ್ಲವನ್ನೂ ತೀರ್ಮಾನಿಸುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು