2:11 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು ಮತ್ತೇನು ಹೇಳಿದ್ರು?

30/11/2021, 15:28

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ .

ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆಂಬ ಕಟೀಲ್ ಹೇಳಿಕೆಗೆ ಕಿಡಿಕಾರಿದರು.

ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕನಾಗಿದ್ದೂ, ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಸಿದ್ದರಾಮ್ಯ ವಾಗ್ದಾಳಿ ನಡೆಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿರುವ ಬಿಎಸ್‍ವೈ ಹೇಳಿಕೆಗೆ ಟಾಂಗ್ ನೀಡಿದ್ದೂ, ಬಿಎಸ್‍ವೈ ಅವರ ಜೇಬಿನಲ್ಲಿ ಮತಗಳು ಇವೆಯೇ? ಈ ರಾಜ್ಯದ ಜನ ಬಿಜೆಪಿ ಕಿತ್ತೊಗೆಯಲು ತೀರ್ಮಾನಿಸಿದ್ದಾರೆಂದು ತಿರುಗೇಟು ನೀಡಿದರು.

ಜೆಡಿಎಸ್ ಯಾವ ಪಕ್ಷದ ಬಿ ಟೀಮ್ ಅಲ್ಲ ಎಂದ ಹೆಚ್‍ಡಿಕೆ ಹೇಳಿಕೆಗೂ ಟಾಂಗ್ ನೀಡಿದ್ದೂ, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹಲವು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದರು. ಹಾಗೆಯೇ 6 ಕಡೆ ಮಾತ್ರ ಜೆಡಿಎಸ್ ಅಭ್ಯರ್ಥಿ ಹಾಕಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಯಾರಿಗೆ ಬೆಂಬಲ ನೀಡುತ್ತದೆ ಎಂದು ವ್ಯಂಗ್ಯವಾಡಿದರು. 

ಈ ವೇಳೆ ಅವರೊಂದಿಗೆ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಆಂಜನೇಯ ಹಾಗೂ ಬಿ. ರಮಾನಾಥ ರೈ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು