6:50 PM Sunday8 - September 2024
ಬ್ರೇಕಿಂಗ್ ನ್ಯೂಸ್
ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್… ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ… ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು… ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ… ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಮುತ್ತಿಗೆ ಯತ್ನ: ಸಿಎಂ ಸಿದ್ದರಾಮಯ್ಯ ಪರ ಪ್ರತಿಭಟನೆ

09/08/2024, 18:57

ಶಿವಮೊಗ್ಗ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ಜತೆ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ.ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟ ಮುತ್ತಿಗೆ ಹಾಕಲು ಯತ್ಬಿಸಿ ಪ್ರತಿಭಟನೆ ನಡೆಸಿತು.
ಶಿವಮೊಗ್ಗದ ನಂಜಪ್ಪ ಬಡಾವಣೆಯ ಮನೆಗೆ ಇಂದು ಮಹಾ ಒಕ್ಕೂಟ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿತು ಮುತ್ತಿಗೆಗೆ ಮುನ್ನವೇ ರಸ್ತೆಗೆ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಪ್ರತಿಭಟನಾಕಾರರು ಸಿದ್ದರಾಮಯ್ಯ ಅವರ ಫೋಟೋ ಪ್ರದರ್ಶಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಲಾಯಿತು. ಪ್ರತಿಭಟನಾಕಾರರು ಮೊದಲ ಬ್ಯಾರಿಕೇಡ್​ ಅನ್ನು ನೂಕಿ ಮುಂದೆ ಸಾಗಿದರು. ಎರಡನೇ ಬ್ಯಾರಿಕೇಡ್​ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದರೂ ಬ್ಯಾರಿಕೇಡ್​ ಮೇಲೆ ಹತ್ತಿ ಒಳ ನುಗ್ಗಲು ಯತ್ನಿಸಿದರು‌. ಈ ವೇಳೆ ಪೊಲೀಸರು ಎಲ್ಲಾ ಪ್ರತಿಭಟನಗಾರರನ್ನು ಬಂಧಿಸಿ, ತಮ್ಮ ವಾಹನದಲ್ಲಿ ಕರೆದುಕೊಂಡು ಹೋದರು.
ಒಕ್ಕೂಟದ ಸಂಚಾಲಕ ಕೆ.ರಂಗನಾಥ್ ಅವರು ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿಎಂ ಸಿದ್ದರಾಮಯ್ಯ ಮೇಲೆ ಮುಡಾದ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ, ಪಾದಯಾತ್ರೆ ನಡೆಸುತ್ತಿದ್ದಾರೆ. ಇವರ ಮೇಲೆಯೇ ಸಾಕಷ್ಟು ಆರೋಪಗಳು ಇರುವಾಗ ಯಾವುದೇ ತಪ್ಪು ಮಾಡದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯ. ಇದರಿಂದ ನಾವು ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದೇವೆ” ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮಹಾ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್‌.ಎಂ.ಶರತ್ ಪಾಲಕ್ಷ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು