1:49 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್

05/12/2022, 22:15

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ.

ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವನ್ನು ಬಳಸುತ್ತಿದ್ದಾರೆ. ಅವರ ಅಭಿವೃದ್ಧಿ ನಿಟ್ಟಿನಲ್ಲಿ, ಅವರಿಗೆ ಬದುಕನ್ನು ಕಟ್ಟಿಕೊಡಲು ಯಾವುದೇ ಕ್ರಮ ಕೈಗೊಂಡಿಲ್ಲ.

ಕಾಂಗ್ರೆಸ್ ಸರಕಾರ ತಂದಿದ್ದ ಯೋಜನೆಗಳನ್ನೂ ಸಂಪೂರ್ಣ
ಸ್ಥಗಿತಗೊಳಿಸಿದ್ದಾರೆ. ಸಬ್ಸಿಡಿ ದರದ ಸೀಮೆಎಣ್ಣೆಯನ್ನು ನೀಡಲೂ ಬಿಜೆಪಿ ಸರಕಾರ ಹಿಂದೇಟು ಹಾಕಿದೆ ಎಂದು ಖಾದರ್ ಹೇಳಿದ್ದಾರೆ.

ನಮ್ಮ ಸರಕಾರ ಇದ್ದಾಗ ಮೀನುಗಾರರ ನೋವಿಗೆ ಸ್ಪಂದಿಸುತ್ತಿತ್ತು. ಬಿಜೆಪಿ ಸರಕಾರ ಬಂದ ಬಳಿಕ ಮೀನುಗಾರರಿಗೆ ಒಂದೇ ಒಂದು ಮನೆಯನ್ನೂ
ನೀಡಲು ಮುಂದಾಗಿಲ್ಲ. ಕೆಲವು ದಿನಗಳ ಹಿಂದೆ ಪಟ್ಟಿ ಕಳುಹಿಸಿದ್ದಾರೆ. ಆದರೆ ಅಲ್ಲಿನ ಮೀನುಗಾರರಿಗೆ ಮನೆ ಕೊಟ್ಟಿಲ್ಲ. ಯಾವ ರೀತಿಯಲ್ಲಿ ಮೀನುಗಾರರನ್ನು ನಡೆಸಿಕೊಳ್ಳುತ್ತಿದ್ದಾರೆ ಎನ್ನವುದಕ್ಕೆ ಸಾಕ್ಷಿ ಇದು.
ಕರಾವಳಿಯ ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಯಾರೂ ಕೂಡ ಮೀನುಗಾರರ ಪರವಾಗಿ ಕೆಲಸ ಮಾಡಿಲ್ಲ.
ಮುಖ್ಯಮಂತ್ರಿ ಮಂಗಳೂರಿಗೆ ಬಂದ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆಯನ್ನು ಮುಂದಿಡುವ ಕೆಲಸ ಮಾಡಿಲ್ಲ. ಹೊಸ ಯೋಜನೆ ಬಿಡಿ, ಕಾಂಗ್ರೆಸ್‌ನ ಯೋಜನೆಗಳನ್ನೂ ಕೂಡಾ ಮೀನುಗಾರರಿಗೆ ತಲುಪಿಸಲು ಇವರಿಗೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೀನುಗಾರರ ಸಮಸ್ಯೆಗೆ ಸ್ಪಂದಿಸದೇ ಇದ್ದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ 10 ದಿನಗಳ ಒಳಗೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಖಾದರ್ ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು