9:19 AM Thursday1 - January 2026
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಗೆ ಮುರಳಿ ಹೊಸಮಜಲು ಆಯ್ಕೆ

31/07/2024, 18:50

ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಮಂಗಳೂರಿನ ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಮುರಳಿ ಹೊಸಮಜಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ. ಬಿ. ಶಶಿಧರ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಇತ್ತಿಚಿಗೆ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೇಮಕಾತಿಯ ಆದೇಶದ ಪ್ರತಿಯನ್ನು ವಿಸ್ತರಿಸಿದರು.

ಮುರಳಿ ಅವರು 30 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ಹಾಗು ಸೃಜನಶೀಲರಾಗಿ ತೊಡಗಿಸಿ ಕೊಂಡಿದ್ದಾರೆ. ಅದಲ್ಲದೆ ಅವರು ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ, ಮಂಗಳೂರು ವಿಭಾಗದ ಅಧ್ಯಕ್ಷರಾಗಿಯು, ರೋಟರಿ ಕ್ಲಬ್ ದಕ್ಷಿಣ ವಿಭಾಗ ಇದರ ಸದಸ್ಯರಾಗಿಯು, ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿಯು ಮತ್ತು ಹಲವಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.
ಬಿಜೆಪಿ ಪ್ರಕೋಷ್ಠದ ರಾಜ್ಯ ಸಮಿತಿಯ ಸಂಯೋಜಕರಾದ ಎಸ್. ದತ್ತಾತ್ರಿ, ಸಹ ಸಂಯೋಜಕರಾದ ಫಣೀಷ್, ವಿಧಾನ ಪರಿಷತ್ ಸದಸ್ಯರಾದ ರವಿ ಕುಮಾರ, ಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ
ಡಾ. ಸಿ. ಬಿ. ಶಶಿಧರ, ಸಹ ಸಂಚಾಲಕರಾದ ಎಂ. ಜಿ. ಭಟ್ ಕುಮ್ಟ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು