ಇತ್ತೀಚಿನ ಸುದ್ದಿ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ ಇಬ್ಬರಿಗೆ ಜಾಮೀನು
05/12/2023, 21:20
ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಬಂಧಿತಳಾದ ಚೈತ್ರಾ ಹಾಗೂ ಶ್ರೀಕಾಂತ್‌ಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ
ಜಾಮೀನು ನೀಡಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಭರವಸೆ ನೀಡಿ 5 ಕೋಟಿ ರೂ. ವಂಚಿಸಿದ ಆರೋಪದ ಚೈತ್ರಾ ಮತ್ತು ಗ್ಯಾಂಗ್ ಮೇಲಿದೆ. ಪ್ರಕರಣ ಸಂಬಂಧಿಸಿದಂತೆ 8 ಮಂದಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಉದ್ಯಮಿ ಗೋವಿಂದ ಪೂಜಾರಿ ಅವರು ಸೆಪ್ಟೆಂಬರ್ 8 ರಂದು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಗ್ಯಾಂಗ್ ವಿರುದ್ಧ ದೂರು ದಾಖಲಿಸಿದ್ದರು.