5:54 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಿಜೆಪಿ ಟಿಕೆಟ್ ಕೈತಪ್ಪಿದರೂ ಕಮಲ ಹಿಡಿದ ಸಂಸದೆ ಸುಮಲತಾ: ಕೇಸರಿ ಪಕ್ಷಕ್ಕೆ ಅಧಿಕೃತ ಸೇರ್ಪಡೆ

05/04/2024, 17:30

ಬೆಂಗಳೂರು(reporterkarnataka.com): ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕೇಸರಿ ಪಕ್ಷ ಸೇರ್ಪಡೆಗೊಂಡರು.


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುಮಲತಾ ಅವರಿಗೆ ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಮಾಜಿ ಸಂಸದರಾದ ಎಸ್.‌ ಶಿವರಾಮನಗೌಡ, ಮಾಜಿ ಕ್ರಿಕೆಟಿಗ ದೊಡ್ಡಗಣೇಶ್‌, ಮುಖಂಡರಾದ ಹರ್ಷ ಗೌಡ,ಗಾಯತ್ರಿ ಜಿ. ತಿಮ್ಮಾರೆಡ್ಡಿ ಗೌಡ, ಶ್ರೀನಿವಾಸ್‌, ತುಕಾರಾಮ್‌ ಗೌಡ ಸೇರಿದಂತೆ ಅವರ ಬೆಂಬಲಿಗರು ಕೂಡ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಮಾಜಿ ಸಚಿವ ಸಿ. ಟಿ. ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಜಿ. ವಿ., ಪ್ರಮುಖರಾದ ಜನಾ‌ರ್ಧನ್‌ ರೆಡ್ಡಿ, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು