5:29 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ 7 ಕೋಟಿ ರೂ. ವಂಚನೆ: ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

13/09/2023, 01:12

ಉಡುಪಿ(reporterkarnataka.com): ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವದ ಪ್ರತಿಪಾದಕಿ, ಮಹಾನ್ ಭಾಷಣಗಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬಯಿಯ ಉದ್ಯಮಿಯೊಬ್ಬರಿಗೆ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಹಾಗೂ ಟೀಮ್ ತಲೆಮರೆಸಿಕೊಂಡಿತ್ತು.
ಇದೀಗ ಪ್ರಕರಣ ಪ್ರಮುಖ ಆರೋಪಿಯಾದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಹಠಾತ್ ಕಾರ್ಯಾಚರಣೆ ನಡೆಸಿ
ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಚೈತ್ರಾ ಕುಂದಾಪು ಮತ್ತು ಆಕೆಯ ಟೀಮ್
ಉಡುಪಿ ಜಿಲ್ಲೆಯ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ
ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 7 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಿಂದುತ್ವ ಕುರಿತು ಪ್ರಖರ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ, ಟಿಕೆಟ್ ಕೊಡಿಸುವುದಾಗಿ ಬಿಲ್ಲವ ಉದ್ಯಮಿಯಾದ ಗೋವಿಂದ ಬಾಬು ಪೂಜಾರಿ ಅವರನ್ನು ನಂಬಿಸಿದ್ದಳು.ತನಗೆ ಕೇಂದ್ರದ ಹಲವು ಬಿಜೆಪಿ ಹಾಗೂ ಆರೆಸ್ಸೆಸ್ ನಾಯಕರ ಪರಿಚಯವಿದೆ ಎಂದು ಹೇಳಿಕೊಂಡಿದ್ದಳು. ಅಲ್ಲದೆ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದಳು. ಮುಗ್ಧರಾದ
ಗೋವಿಂದ ಬಾಬು ಪೂಜಾರಿ ಅವರಿಂದ ಹಂತ ಹಂತವಾಗಿ 7 ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು