9:25 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಿಜೆಪಿ ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿದೆ, ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ: ಬೊಮ್ಮಾಯಿ

29/12/2021, 15:49

ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುವುದು ಮೊದಲಿನಿಂದಲೂ ಕೇಂದ್ರದ ವರಿಷ್ಠರ ಇಚ್ಛೆಯಾಗಿತ್ತು. ಈಗ ಕಾರ್ಯಕಾರಿಣಿಯಲ್ಲಿ ರಾಜ್ಯ ಉಸ್ತುವಾರಿ ಅರಣ್ ಸಿಂಗ್ ಅವರು ಪುನರ್ ಉಚ್ಛರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿದ್ದ ಕಾರಣ ಮುಂದುವರಿಯಲು ತಿಳಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಪಕ್ಷ ಬಲಿಷ್ಠವಾಗಬೇಕು ಪಕ್ಷ ಮತ್ತು ಸರ್ಕಾರದ ನಡುವೆ ಸಂಯೋಜನೆಯಾಗಬೇಕು. ಒಗ್ಗಟ್ಟಿನಿಂದ ಎಲ್ಲರೂ ಪಕ್ಷ ಸಂಘಟನೆ, ಬೆಳವಣಿಗೆ ಮತ್ತು ಬರುವಂತಹ ಚುನಾವಣೆ ಪರಿಶ್ರಮದಿಂದ ಎದುರಿಸುತ್ತೇವೆ ಎಂದರು.

ಸದ್ಯದಲ್ಲಿ ಯಾವುದೇ ದೆಹಲಿ ಪ್ರವಾಸವಿಲ್ಲ. ಹಲವಾರು ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಡೆಸುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು