4:20 PM Monday1 - September 2025
ಬ್ರೇಕಿಂಗ್ ನ್ಯೂಸ್
Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

01/09/2025, 16:00

ಮೈಸೂರು(reporterkarnataka.com):ಬಿಜೆಪಿಯವರು ಧರ್ಮಸ್ಥಳಕ್ಕೆ ರಾಜಕೀಯ ಯಾತ್ರೆ ಕೈಗೊಂಡಿದ್ದಾರೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದರು.
ಮೈಸೂರಿಗೂ ಚಾಮುಂಡಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರು ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ಲವೇ? ಎಂದು ಪ್ರಶ್ನಿಸಿದರು. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು.
ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದ ಮುಖ್ಯಮಂತ್ರಿಗಳು, ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಅವಕಾಶ ನೀಡಲಾಗಿದೆ ಎಂದವರು.
ಯಾವುದೇ ದಸರಾ ಹಬ್ಬದ ಮೇಲೆ ಈ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ ಎಂದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ? ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ ಎಂದರು.
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ವಿಷಯ ಇರುವುದು ಚಾಮುಂಡಿ ಬೆಟ್ಟದ್ದಲ್ಲ, ದಸರಾ ಹಬ್ಬದ್ದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು