ಇತ್ತೀಚಿನ ಸುದ್ದಿ
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್
29/09/2025, 19:38

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmsil.com
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಗೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎಸ್. ಪೊನ್ನಣ್ಣ ತಿಳಿಸಿದ್ದಾರೆ.
ಪ್ರಕರಣದಲ್ಲಿ ಎ.ಎಸ್ ಪೊನ್ನಣ್ಣ ,ಡಾ.ಮಂತರ್ ಗೌಡ ಹಾಗೂ ತೆನ್ನೀರಾ ಮೈನಾ ಅವರ ಪಾತ್ರ ಇದೆ ಎಂಬ ಆರೋಪ ನಿರಾಧಾರ ಎಂಬುದು ಸಾಬೀತಾಗಿದ್ದು,ಬಿಜೆಪಿ ರಾಜ್ಯ ನಾಯಕರು ಸೇರಿದಂತೆ ಜಿಲ್ಲಾ ಮುಖಂಡರು ವಿನಯ್ ಸಾವಿನಲ್ಲೂ ರಾಜಕೀಯ ಮಾಡಿದರು. ವಿನಯ್ ಸೋಮಯ್ಯ ಸಾವಿನಲ್ಲೂ ಬಿಜೆಪಿ ನಾಯಕರು ರಾಜಕೀಯ ಮಾಡಿದ್ದು ವಿನಯ್ ಕುಟುಂಬಸ್ಥರ ಜೊತೆ ಬಿಜೆಪಿ ನಾಯಕರು ಸಾವಿನಲ್ಲೂ ರಾಜಕೀಯ ಮಾಡಿ ತೆರಳಿದರು.
ಇದೀಗ ಮೃತ ವಿನಯ್ ಕುಟುಂಬಕ್ಕೆ ಅಗತ್ಯ ಸಹಕಾರ ನಾನೇ ಮಾಡಬೇಕಾಗಿದೆ ಎಂದರು.