9:19 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಬಿಜೆಪಿಯ ಡಬಲ್ ಎಂಜಿನ್ ಸರಕಾರ ಇರುವಲ್ಲೆಲ್ಲ ನಿರಂತರ ಅಭಿವೃದ್ಧಿ: ಕೇಂದ್ರ ಸಚಿವೆ ಭಾರತಿ ಪವಾರ್

26/04/2023, 20:29

ಮಂಗಳೂರು(reporterkarnataka.com): ಭಾರತೀಯ ಜನತಾ ಪಕ್ಷದ ಡಬಲ್ ಎಂಜಿನ್ ಸರಕಾರಗಳು ಇರುವಲ್ಲೆಲ್ಲ ದೂರದೃಷ್ಟಿಯ ಅಭಿವೃದ್ಧಿ ಯೋಜನೆಗಳು ನಿರಂತರವಾಗಿ ನಡೆಯುತ್ತಿದ್ದು, ಜನರ ಜೀವನಮಟ್ಟವನ್ನು ಎತ್ತರಿಸುವ ಹಲವು ನಿದರ್ಶನಗಳು ಕಣ್ಣಿಗೆ ರಾಚುವಂತಿವೆ. ಅಮೃತಕಾಲದಲ್ಲಿ ಭಾರತವನ್ನು ಜಗತ್ತಿನ ನಂಬರ್ ಒನ್ ರಾಷ್ಟ್ರವನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಗಳನ್ನು ಕರ್ನಾಟಕದಲ್ಲಿ ಬಿಜೆಪಿ ಸರಕಾರವು ಅತ್ಯುತ್ತಮ ರೀತಿಯಲ್ಲಿ ಜಾರಿಗೊಳಿಸಿದೆ ಎಂದು ಕೇಂದ್ರ ಆರೋಗ್ಯಖಾತೆ ರಾಜ್ಯ ಸಚಿವೆ ಭಾರತಿ ಪವಾರ್‌ ಹೇಳಿದರು.
ಬಿಜೆಪಿಯ ವಿಭಾಗ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಅತ್ಯಂತ ತಳಮಟ್ಟದಿಂದ ಬಂದ ಮಹಿಳೆಯೊಬ್ಬರಿಗೆ ಬಿಜೆಪಿ ಅವಕಾಶ ನೀಡಿರುವುದನ್ನು ಎಲ್ಲ ವರ್ಗದ ಜನತೆ ಸ್ವಾಗತಿಸಿ, ಬೆಎಂಬಲ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಗೆಲುವು ನಿಶ್ಚಿತವಾಗಿದೆ ಎಂದು ಭಾರತಿ ಪವಾರ್ ವಿಶ್ವಾಸ ವ್ಯಕ್ತಪಡಿಸಿದರು.

ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಎರಡು ದಿನಗಳ ಕಾಲ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಅವರು, ಬಿಜೆಪಿ ಪರವಾಗಿ ಜನರ ಒಲವಿರುವುದು ತಮ್ಮ ಅನುಭವಕ್ಕೆ ಬಂದಿದೆ ಎಂದರು.
ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕದ ಸಾಧನೆಗಳು ಅಪೂರ್ವವಾಗಿವೆ. ಆರೋಗ್ಯಕ್ಷೇತ್ರದ ಸೇವೆಗಳನ್ನು ಬಲಪಡಿಸಲು ಬಿಜೆಪಿ ಸರಕಾರ ಕೈಗೊಂಡ ಕ್ರಮಗಳನ್ನು ಅಂಕಿ-ಅಂಶಗಳ ಸಹಿತ ವಿವರಿಸಿದರು.
ಕೋವಿಡ್‌ ಕಾಲದಲ್ಲಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದಾಗಲೂ ಆರೋಗ್ಯ ಸೇವೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರಕಾರ ಗರಿಷ್ಠ ಪ್ರಯತ್ನಗಳನ್ನು ಮಾಡಿದೆ. 2021ರಲ್ಲಿ ರಾಜ್ಯ ಸರಕಾರವು ನಿಗದಿತ ಗುರಿ ಮೀರಿ 8,618 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಿದೆ. 2019ರಲ್ಲಿ ಹುಬ್ಬಳ್ಳಿಯಲ್ಲಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 150 ಕೋಟಿ ರೂ ವೆಚ್ಚದ 8 ಸೂಪರ್ ಸ್ಪೆಷಾಲಿಟಿ ಬ್ಲಾಕ್‌ಗಳಲ್ಲಿ 200 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಿದೆ.
ಈ ವರ್ಷ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಹಾಗೂ ಶಿರಸಿಯಲ್ಲಿ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಂತದಲ್ಲಿದೆ. ರಾಜ್ಯಾದ್ಯಂತ 438 ‘ನಮ್ಮ ಕ್ಲಿನಿಕ್‌’ ಹೆಸರಿನ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಇದು 20 ಪ್ರಾಥಮಿಕ ಆರೋಗ್ಯ ಸೇವೆಗಳ ಸಮಗ್ರ ಪ್ಯಾಕೇಜ್ ಅನ್ನು ಒದಗಿಸುತ್ತಿದೆ. ಇವುಗಳ ಪೈಕಿ ಬೆಂಗಳೂರಿನಲ್ಲಿ 108 ಸೇರಿದಂತೆ ರಾಜ್ಯದಲ್ಲಿ 272 ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭಿಸಿವೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ 1,052 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಭಾರತಿ ಪವಾರ್‌ ಮಾಹಿತಿ ನೀಡಿದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ 1.38 ಕೋಟಿಗೂ ಹೆಚ್ಚು ಆರೋಗ್ಯ ಕಾರ್ಡ್‌ಗಳನ್ನು ಒದಗಿಸಲಾಗಿದೆ. ಉಚಿತ ಡಯಾಲಿಸಿಸ್‌ ಸೌಲಭ್ಯಗಳನ್ನು ಒದಗಿಸಲಾಗಿದ್ದು, 30,000 ಡಯಾಲಿಸಿಸ್‌ ಸೈಕಲ್‌ಗಳಿಂದ 60,000 ಸೈಕಲ್‌ಗಳಿಗೆ ಹೆಚ್ಚಿಸಲಾಗಿದೆ. ಈ ವರ್ಷವೇ ಇದನ್ನು 1 ಲಕ್ಷ ಸೈಕಲ್‌ಗಳಿಗೆ ಹೆಚ್ಚಿಸುವ ಉದ್ದೇಶವಿದೆ.
ಕೋವಿಡ್ ಸಾಂಕ್ರಾಮಿಕದ ನಂತರ ಒಂದು ವರ್ಷದೊಳಗೆ 8 ಕೋಟಿ ಲಸಿಕೆ ಡೋಸ್‌ಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. 2021 ಡಿಸೆಂಬರ್ ವೆಳೆಗೆ ರಾಜ್ಯದ ಎಲ್ಲ ಜನಸಂಖ್ಯೆಗೆ ಕನಿಷ್ಠ ಒಂದು ಡೋಸ್‌ ಲಸಿಕೆ ನೀಡಲಾಗಿದೆ.
ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನದಡಿ 15 ಲಕ್ಷಕ್ಕೂ ಹೆಚ್ಚು ಗರ್ಭಿಣಿಯರಿಗೆ ಪ್ರಸವ ಪೂರ್ವ ಆರೈಕೆ ಮಾಡಲಾಗಿದೆ. ಶುಚಿತ್ವ ಯೋಜನೆಯಡಿ 19 ಲಕ್ಷ ವಿದ್ಯಾರ್ಥಿನಿಯರಿಗೆ 1 ರೂ.ಗೆ ಸ್ಯಾನಿಟರಿ ನ್ಯಾಪ್ಕಿನ್ ವಿತರಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಪಕ್ಷದ ಜಿಲ್ಲಾ ವಕ್ತಾರ ಜಗದೀಶ್‌ ಶೇಣವ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಆರ್‌.ಸಿ ನಾರಾಯಣ್ ಮತ್ತು ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು