11:33 AM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಕೊಡಗು ಮೂಲದ ಓರ್ವ ಆರೋಪಿಗೆ ಜಾಮೀನು

26/03/2026, 18:56

ಮಂಗಳೂರು(reporterkarnataka.com): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್‌ ಎಂಬಾತನಿಗೆ ಜಾಮೀನು ಮಂಜೂರಾಗಿದೆ.
2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್‍ ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರವೀಣ್ ನೆಟ್ಟಾರ್ ಮೇಲೆ ಆರೋಪಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 26 ಮಂದಿಯನ್ನು ಎನ್‍ಐಎ ವಶಕ್ಕೆ ಪಡೆದುಕೊಂಡಿತ್ತು. ಇದೀಗ ಈ ಪ್ರಕರಣದ 26ನೇ ಆರೋಪಿಯಾಗಿರುವ ಕೊಡಗು ಸೋಮವಾರಪೇಟೆ ಮೂಲದ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ.
ಈತ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಹಿನ್ನೆಲೆಯಲ್ಲಿ ಬಂಧಿಯಾಗಿದ್ದ. ಮುಸ್ತಫಾ ಪೈಚಾರ್ ಈ ಕೃತ್ಯದ ಮುಖ್ಯ ರೂವಾರಿ ಆಗಿದ್ದ ಎಂದು ಎನ್‍ಐಎ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿತ್ತು. ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಲಾಗಿತ್ತು. ರಿಯಾಝ್‌ ಎಂಬಾತ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದು ಬಹಿರಂಗವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು