ಇತ್ತೀಚಿನ ಸುದ್ದಿ
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ತನಿಖೆ ಎನ್ಐಎಗೆ: ರಾಜ್ಯ ಸರಕಾರ ತೀರ್ಮಾನ
29/07/2022, 19:32
ಬೆಂಗಳೂರು(reporterkarnataka.com):ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.
ಎನ್ಐಎ ತನಿಖೆಗೆ ಒಪ್ಪಿಸುವ ಬಗ್ಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಪ್ರವೀಣ್ ಕೊಲೆ ಪ್ರಕರಣದಲ್ಲಿ ಅಂತಾರಾಜ್ಯ ನಂಟು ಇರುವ ಹಿನ್ನೆಲೆಯಲ್ಲಿ ಎನ್ ಐಎ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.