8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ‌ ಪ್ರಕರಣ: ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆಯಲ್ಲಿ ಹೇಳಿದ್ದೇನು..?

28/07/2022, 11:16

ಬೆಳ್ಳಾರೆ( reporterkarnataka.com): ಜಿಲ್ಲಾ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು , ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.

ಬೆಳ್ಳಾರೆಯಲ್ಲಿ ಮಾದ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣದ ಕುರಿತಾಗಿ ಮುಖ್ಯಮಂತ್ರಿಗಳು ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯಪಡೆದು ಆರು ತಂಡಗಳನ್ನು ರಚನೆ ಮಾಡಿದ್ದೇವೆ. ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಅವಕಾಶ ಕೊಡಬೇಕು ಎಂದು ಅವರು ವಿನಂತಿಸಿದರು.

ಪೊಲೀಸರು ವಶಕ್ಕೆ ಪಡೆದವರು ಕೃತ್ಯದಲ್ಲಿ ಭಾಗಿಯಾದವರೇ ಅಥಾವ ಪರೋಕ್ಷವಾಗಿ ಸಹಕರಿಸಿದವರೇ ಎಂಬ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಿಚಾರಣೆ ಹಂತದಲ್ಲಿ ನಾನು ಇಷ್ಟು ಮಾತ್ರ ಹೇಳಬಲ್ಲೆ ಎಂದು ಅಲೋಕ್ ಕುಮಾರ್ ತಿಳಿಸಿದರು.

ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಜ ನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು ಎಂದು ಲಾಠಿ ಚಾರ್ಜ್ ಘಟನೆಯ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದಾರೆ ಪರಿಸ್ಥಿತಿ ಹತೋಟಿಯಲ್ಲಿದೆ. ಜನರು ಯಾರು ಗುಂಪು ಕಟ್ಟಿ ಓಡಾಡಬಾರದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು