9:14 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ದುರುದ್ದೇಶದ ಪ್ರತಿಭಟನೆ; ಕೆಂಪುಕಲ್ಲು ನಿಯಮಾವಳಿ ಸರಳೀಕರಣಕ್ಕೆ ಸಂಫುಟ ಒಪ್ಪಿಗೆ ನೀಡಿದೆ: ದ.ಕ. ಕಾಂಗ್ರೆಸ್

16/09/2025, 18:39

ಮಂಗಳೂರು(reporterkarnataka.com): ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ. ಶೀಘ್ರದಲ್ಲೇ ಗೆಜೆಟ್ ನೋಟಿಫಿಕೇಶನ್ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.
ಕೆಂಪು ಕಲ್ಲು ಸಾಗಾಟಕ್ಕೆ ‘2ಡಿ’ ಎಂಬ ಹೊಸ ರಾಯಲ್ಟಿಯನ್ನು ಸೇರಿಸಿದ ಕಾರಣದಿಂದ ಕರಾವಳಿಯಲ್ಲಿ ಕೆಂಪುಕಲ್ಲು ಸಾಗಾಟಕ್ಕೆ ಸಮಸ್ಯೆ ಆರಂಭವಾಗಿತ್ತು. ರಾಯಲ್ಟಿ ಇಳಿಸಬೇಕು ಎನ್ನುವುದು ಕೆಂಪು ಕಲ್ಲು ತೆಗೆಯುವವರ ಪ್ರಮುಖ ಬೇಡಿಕೆಯಾಗಿದ್ದು, ಅದರಂತೆ ಕೆಂಪುಕಲ್ಲು ಹೊಸ ನಿಯಮಾವಳಿಗೆ ಸಂಬಂಧಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡರು ಈಗಾಗಲೇ ಈ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಜಸ್ವ ಇಳಿಕೆ ಮಾಡುವುದು ಹಾಗೂ ಪರವಾನಗಿ ನೀಡುವ ವಿಧಾನವನ್ನು ಸರಳೀಕರಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಿದ್ದರಾಮಯ್ಯ ನೇತೃತ್ವ ರಾಜ್ಯ ಸರ್ಕಾರ ಬಡವರ ಪರ ಕಾಳಜಿ ವಹಿಸುತ್ತಿದ್ದು, ಸರಳೀಕೃತ ನಿಯಮದೊಂದಿಗೆ ಬಡವರ ಪರವಾಗಿ ನೀತಿ ರೂಪಿಸಿದೆ. ಈ ಹಿಂದೆ ಇದ್ದ 5 ಲೈಸೆನ್ಸ್ ಬದಲಿಗೆ ಈಗಾಗಲೇ 25 ಲೈಸೆನ್ಸ್‌ಗಳನ್ನು ನೀಡಲಾಗಿದೆ. ಶೀಘ್ರದಲ್ಲಿ ಸರಳೀಕೃತ ನಿಯಮದೊಂದಿಗೆ ಮರಳು ಮತ್ತು ಕೆಂಪು ಕಲ್ಲು ಅಭಾವಕ್ಕೆ ಮುಕ್ತಿ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು