9:06 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ: ಭಾರತ – ನೇಪಾಳ‌ ನಡುವಿನ ಪಂದ್ಯ ವೀಕ್ಷಿಸಿದ ಸಚಿವೆ ಹೆಬ್ಬಾಳ್ಕರ್

14/11/2025, 22:00

ಬೆಂಗಳೂರು(reporterkarnataka.com): ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ ಮೈದಾನದಲ್ಲಿ ನಡೆಯುತ್ತಿರುವ ಅಂಧ ಮಹಿಳೆಯರ ಮೊದಲ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರಿಯಾಗಿ ಕೈಕಾಲು ಇದ್ದರೂ, ಕಣ್ಣುಗಳು ಕಾಣಿಸಿದರೂ ಸಾಮಾನ್ಯ ಜನರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಕಷ್ಟ. ಆದರೆ, ಸರಿಯಾಗಿ ಕಣ್ಣುಕಾಣದ ಮಕ್ಕಳು ಕ್ರಿಕೆಟ್‌ ಆಡುವುದು ಅಷ್ಟು ಸುಲಭವಲ್ಲ ಎಂದರು.


ಈ ಮಹತ್ವದ ಟೂರ್ನಿಯ ಪ್ರಮುಖ ಭಾಗವನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ನಮ್ಮ ರಾಜ್ಯವು ಕ್ರೀಡೆಗೆ ಸಮಾನ ಅವಕಾಶಗಳನ್ನು ಉತ್ತೇಜಿಸುವಲ್ಲಿ ಮುಂಚೂಣಿಯಲ್ಲಿರುವುದು ಎಲ್ಲರೂ ತಿಳಿದಿರುವ ವಿಷಯ. ನಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

* *ಪಂದ್ಯ ವೀಕ್ಷಿಸಿದ ಸಚಿವರು:*
ಭಾರತ ಹಾಗೂ ನೇಪಾಳ ನಡುವಿನ ಪಂದ್ಯವನ್ನು ಕೆಲಕಾಲ ಸಚಿವರು ವೀಕ್ಷಿಸಿದರು. ಚಪ್ಪಾಳೆ ತಟ್ಟುವ ಮೂಲಕ ಎರಡೂ ತಂಡಗಳ ಆಟಗಾರ್ತಿಯರನ್ನು ಹುರಿದುಂಬಿಸಿದರು. ಬಳಿಕ ಕೆಲಕಾಲ ಪಂದ್ಯದ ವೀಕ್ಷಕ ವಿವರಣೆಯಲ್ಲಿ ಪಾಲ್ಗೊಂಡರು.
ಈ ವೇಳೆ ಸಮರ್ಥನಂ ಟ್ರಸ್ಟ್ ಸಂಸ್ಥಾಪಕರಾದ ಡಾ.ಮಹಾಂತೇಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು