3:34 PM Friday21 - February 2025
ಬ್ರೇಕಿಂಗ್ ನ್ಯೂಸ್
State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ… ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ… ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ,… Waterfalls Tragedy | ಚಿಕ್ಕಮಗಳೂರು ಕಾಮೇನಹಳ್ಳಿ ಜಲಪಾತ: ಈಜಲು ಹೋದ ಯುವಕನ ತಲೆ… CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

Blood Donation | 3 ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ

21/02/2025, 09:02

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆಯ ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿಂದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟರ್ ಸಭಾಂಗಣದಲ್ಲಿ ಚಾಲನೆ ನೀಡಿದರು.


ಕೃತಕವಾಗಿ ತಯಾರಿಸಲು ಸಾಧ್ಯವಾಗದ ರಕ್ತವನ್ನು ಮತ್ತೊಬ್ಬರಿಗೆ ನೀಡಿ ಜೀವ ಉಳಿಸುವಂಥ ಕೆಲಸ ನಿಜಕ್ಕೂ ಶ್ರೇಷ್ಠವಾಗಿದ್ದು, 18 ವರ್ಷ ತುಂಬಿದ ಎಲ್ಲಾ ಅರ್ಹರು ತಪ್ಪದೇ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳು ಕ್ಷೀಣಿಸುತ್ತಿದ್ದವು. ವರ್ಷವಾರು ನಿಗದಿತ ಗುರಿಗಿಂತ ಕಡಿಮೆ ಸಂಗ್ರಹವಿದೆ. ಇದಕ್ಕೆ ಪ್ರೋತ್ಸಾಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಹಣಾ ಘಟಕ ಇವರೊಂದಿಗೆ ಜೆಎಸ್‌ಡಬ್ಲ್ಯು ಜಿಂದಾಲ್ ಸಹಯೋಗದಲ್ಲಿ ಜಿಂದಾಲ್ ಆವರಣದ ವಿವಿಧ 15 ಸ್ಥಳಗಳಲ್ಲಿ ರಕ್ತ ಭಂಡಾರ ಮೂಲಕ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ಹಾಗೂ ರಕ್ತದ ಕೊರತೆ ತಗ್ಗಿಸಲು ರಕ್ತದಾನ ಶಿಬಿರವು ಫೆ.22 ರ ವರೆಗೆ ನಡೆಯಲಿದ್ದು, ಈ ಬೃಹತ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಪ್ರತಿಯೊಬ್ಬರೂ ರಕ್ತದಾನ ಮಾಡಬಹುದು ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಹಣಾ ಘಟಕ ಅಧಿಕಾರಿ ಡಾ.ಇಂದ್ರಾಣಿ ವಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮಲ್ಲಿನ ಎಲ್ಲಾ ಅಂಗಾಂಗಗಳನ್ನು ದಾನ ಮಾಡಬಹುದಾಗಿದ್ದು, ಅದರಲ್ಲಿ ರಕ್ತದಾನ ಬಹುಮುಖ್ಯವಾಗಿದೆ. ಜಿಲ್ಲೆಯ ಬಿಮ್ಸ್ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಮತ್ತು ಇತರೆ ರಕ್ತ ಕೇಂದ್ರಗಳಲ್ಲಿ ಅತಿ ಅವಶ್ಯಕವಾಗಿದೆ ಎಂದರು.
ಅಪಘಾತಗಳಿಂದ ಗಾಯಗೊಂಡವರಿಗೆ ಹಾಗೂ ರಕ್ತಹೀನತೆಯಿಂದ ಬಳಲುವ ಗರ್ಭಿಣಿಯರಿಗೆ, ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ಮತ್ತು ಥಲಸೀಮಿಯಾ ದಂತಹ ಕಾಯಿಲೆಯಿಂದ ಬಳಲುತ್ತಿರುವವರಿಗೆ ನಿರಂತರವಾಗಿ ರಕ್ತದ ಅವಶ್ಯಕತೆ ಇದೆ. ರಕ್ತದಾನದಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಗೆ ನಿರಂತರವಾಗಿ ಸಹಕಾರಿಯಾಗಲಿದೆ ಎಂದರು.
ಈ ಶಿಬಿರದಲ್ಲಿ 5000 ರಕ್ತ ಯುನಿಟ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ವರ್ಷದಲ್ಲಿ ಒಟ್ಟು 13,792 ರಕ್ತ ಯುನಿಟ್ ಸಂಗ್ರಹ ಮಾಡುವ ಗುರಿ ಇದ್ದು, ಈವರೆಗೆ 6000 ರಕ್ತ ಯುನಿಟ್ ಸಂಗ್ರಹ ಮಾಡಲಾಗಿದೆ ಎಂದು ಅವರು ತಿಳಿಸಿದರು.
18 ವರ್ಷ ತುಂಬಿದ ಎಲ್ಲಾ ಅರ್ಹ ಪುರುಷ ಮತ್ತು ಮಹಿಳೆಯರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ರಕ್ತದ ಕೊರತೆ ನೀಗಿಸಿ ಜೀವ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ರಕ್ತದಾನ ಶಿಬಿರ ನಡೆಯುವ ಸ್ಥಳ:ಜಿಂದಾಲ್‌ನ ಓಪಿಜೆ ಸೆಂಟರ್‌ನ ತಮನ್ನಾ ಶಾಲೆ, ಜಿಂದಾಲ್ ಸಂಜೀವಿನಿ ಆಸ್ಪತ್ರೆ, ವಿದ್ಯಾನಗರದ ಆರೋಗ್ಯ ಕೇಂದ್ರ ಮತ್ತು ಲಿಟಲ್ ಎಲ್ಲೆ, ಹೆಚ್‌ಎಸ್‌ಟಿ ಕಾಂಪ್ಲೆಕ್ಸ್, ಸಿಆರ್‌ಎಂ-1 ಪ್ಲಾö್ಯಂಟ್, ಲಾಜಿಸ್ಟಿಕ್ ಪ್ಲಾಂಟ್, ಎಸ್‌ಎಂಎಸ್-4 ಪ್ಲಾö್ಯಂಟ್, ಹೆಚ್‌ಆರ್‌ಡಿ ಪ್ಲಾö್ಯಂಟ್, ಜೆಎಸ್‌ಎಂಎಸ್‌ಹೆಚ್‌ನ ಸ್ಟೆಪ್‌ಡೌನ್ ಐಸಿಯು ಮತ್ತು ಜೆಎಸ್‌ಡಬ್ಲೂö್ಯ ಎನರ್ಜಿ ಸಭಾಂಗಣದಲ್ಲಿ ಬೆಳಿಗ್ಗೆ 09 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು