1:28 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್, ಕುಲದ ಬಗ್ಗೆ ಮಾತನಾಡುವ ಸಿ.ಟಿ. ರವಿ ಹಮ್ಮಿನ ಕುರಿತು ಜನ ಯೋಚಿಸ್ತಾರೆ: ಎಂಎಲ್ ಸಿ ಭೋಜೇಗೌಡ

14/05/2023, 23:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಜನತಾ ದಳದ
ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಹೇಳಿದರು.
ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆದವರು. ಅವರಿಗೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ, ಅದಕ್ಕೊಂದು ಇತಿಮಿತಿ ಇರಬೇಕು.
ದೇವೇಗೌಡರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು ಸರಿಯಲ್ಲ ಎಂದರು.
ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಅವರು ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು. ಯಾರನ್ನೋ ಮೆಚ್ವಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ, ಯಾರನ್ನೂ ಬಿಟ್ಟಿಲ್ಲ.
ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು