4:41 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು ಹೊರ ವಲಯದಲ್ಲಿ ಮತ್ತೆ ಹರಿದ ನೆತ್ತರು: ತೊಕ್ಕೊಟ್ಟಿನಲ್ಲಿ ರೌಡಿಶೀಟರ್‌ ಭೀಕರ ಕೊಲೆ

27/03/2026, 12:41

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆ ಮೂಲಕ ಕರಾವಳಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ.
ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಿಶೀಟರ್.
ಇಂದು ಬೆಳ್ಳಂಬೆಳಗ್ಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ 2022ರ ಮೇ ತಿಂಗಳಲ್ಲಿಯೂ ಇದೇ ರೀತಿ ಆರೀಫ್ ಕೊಲೆಗೆ ಯತ್ನ ನಡೆದಿತ್ತು. ಬೆಳಗ್ಗೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು. ವಿವಾಹಿತನಾಗಿರುವ ಆರೀಫ್‌ ಪತ್ನಿ ಹಾಗೂ ಮೂರು ಗಂಡು, ಒಂದು ಹೆಣ್ಣು ಒಟ್ಟು ನಾಲ್ವರು ಮಕ್ಕಳನ್ನು ಅಗಲಿದ್ದಾನೆ. ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು