2:51 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಬಿಎಂಟಿಸಿ: ಒಂದೇ ತಿಂಗಳಲ್ಲಿ 4.26 ಲಕ್ಷ ರೂ. ದಂಡ ಸಂಗ್ರಹ; ಮಹಿಳಾ ಸೀಟಿನಲ್ಲಿ ಕುಳಿತ್ತಿದ್ದ ಪುರುಷ ಪ್ರಯಾಣಿಕರಿಂದಲೂ ವಸೂಲಿ

11/12/2021, 12:54

ಬೆಂಗಳೂದು(reporterkarnataka.com): ಬೆಂಗಳೂರು ನಗರ ಸಾರಿಗೆ ಇಲಾಖೆ ಬಿಎಂಟಿಸಿ ನವೆಂಬರ್ ತಿಂಗಳಲ್ಲಿ ನಿಯಮ ಉಲ್ಲಂಘಿಸಿದವರಿಂದ ಭರ್ಜರಿ ಹಣ ಸಂಗ್ರಹಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ಅಧಿಕಾರಿಗಳು, ಬಿಎಂಟಿಸಿ ತನಿಖಾ ತಂಡ ನವೆಂಬರ್‌ ನಲ್ಲಿ ಒಟ್ಟು 20,432 ಟ್ರಿಪ್‌ ಗಳನ್ನು ತಪಾಸಣೆ ಮಾಡಿ 2580 ಟಿಕೆಟ್‌ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದೆ. 

ಇಡೀ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿದ 2,794 ಪ್ರಯಾಣಿಕರಿಂದ ಬರೋಬ್ಬರಿ 4,26,734 ರೂ. ದಂಡ ಪಡೆಯಲಾಗಿದೆ. ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟಿದ್ದ ಆಸನಗಳಲ್ಲಿ ಕುಳಿತಿದ್ದ 214 ಪುರುಷ ಪ್ರಯಾಣಿಕರಿಂದ ಒಟ್ಟು 21,400 ರೂ. ಸಂಗ್ರಹಿಸಿದೆ.

ಇನ್ನು ಕರ್ತವ್ಯ ಲೋಪದ ಆರೋಪದಡಿ ಒಟ್ಟು 1642 ಪ್ರಕರಣಗಳು ಬಸ್ ನಿರ್ವಾಹಕರ ಮೇಲೆ ದಾಖಲಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು