5:26 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

26/06/2025, 13:11

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಆರೋಗ್ಯಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್* ಘೋಷಿಸಿದ್ದಾರೆ.


ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.
ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆಯನ್ನು ಹಾಕಿಕೊಂಡಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಎಲ್ಲರಿಗೂ, ಸುಲಭ ಹಾಗೂ ಸುಲಲಿತವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಡಾ. ಪಾಟೀಲ್‌ ಹೇಳಿದರು.
ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆಯನ್ನು ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಆರಂಭಿಸಲಾಗುವುದು. ಅತಿ ಶೀಘ್ರದಲ್ಲೇ ಇದು ಲೋಕಾರ್ಪಣೆ ಆಗಲಿದೆ ಎಂದರು.

*ಸೀಟ್‌ ಬ್ಲಾಕಿಂಗ್‌ ಇಲ್ಲ:*
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 100% ಪಾರದರ್ಶಕತೆ ಇದೆ. ಯಾವುದೇ ಸೀಟ್ ಬ್ಲಾಕಿಂಗ್ ನಮ್ಮಲ್ಲಿ ಇಲ್ಲ. ಮೆರಿಟ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ (ಕೆಇಎ) ಮೆಡಿಕಲ್ ಸೀಟು ಹಂಚಿಕೆ ಮಾಡಲಾಗುತ್ತದೆ. 800 ಮೆಡಿಕಲ್ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

*ಇಲಾಖೆ ವತಿಯಿಂದ ಅನೇಕ ಯೋಜನೆ:*
ನಮ್ಮ‌ ಇಲಾಖೆ ವತಿಯಿಂದ ಕಾರ್ಯಕರ್ತರ ಅಹವಾಲು ಸ್ವೀಕರಿಸಲಾಗಿದೆ. ಎಲ್ಲೆಲ್ಲಿ ಆಸ್ಪತ್ರೆಗಳನ್ನು ಸುಧಾರಣೆ ಮಾಡಬೇಕು ಎಂದು ಸಲಹೆ ಕೊಟ್ಟಿದ್ದಾರೆ. ನಮ್ಮ ಇಲಾಖೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತಂದಿದ್ದೇವೆ ಎಂದು ಸಚಿವರು ವಿವರಿಸಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ರಾಜ್ಯಾದ್ಯಂತ ಮಾಡಲು ಆರಂಭಿಸಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾರಂಭವಾಗಿದೆ.
ಜಯದೇವ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಉದ್ಘಾಟನೆ ಮಾಡಿದ್ದೇವೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದೇವೆ. ಈ ಈಗಾಗಲೇ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ವಿವರಿಸಿದರು.
2 ಲಕ್ಷದ 86 ಸಾವಿರ ಯುವಕರು ಯುವ ನಿಧಿ ಯೋಜನೆಯಲ್ಲಿ ನೋಂದಣಿ ಆಗಿದ್ದಾರೆ. ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಕೆಲವು ಸುಧಾರಣೆಗಳನ್ನು ತರುತ್ತಿದ್ದೇವೆ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು