4:45 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ತುಳು ಭಾಷೆ ತುಳು ಸಂಸ್ಕೃತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಿ: ಪ್ರೊ. ಕೃಷ್ಣಮೂರ್ತಿ

02/03/2025, 10:13

ಮಂಗಳೂರು (reporterkarnataka.com): ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿ ಆಶ್ರಯದಲ್ಲಿ ನಡೆಯುವ ವಿದ್ಯಾರ್ಥಿ ತುಳು ಸಮ್ಮೇಳನದ ಪೂರ್ವಭಾವಿ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ ತುಳು ಭವನದಲ್ಲಿ ಜರಗಿತು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.
ಕೃಷ್ಣಮೂರ್ತಿ ಸುರತ್ಕಲ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ತುಳು ಸಂಸ್ಕøತಿಯ ಬಗ್ಗೆ ಎಲ್ಲರೂ ಒಲವು ಬೆಳೆಸಿಕೊಳ್ಳಬೇಕು, ಪದವಿ ಶಿಕ್ಷಣದಲ್ಲಿ ತುಳು ಪಠ್ಯ ಎಲ್ಲಾ ಕಾಲೇಜುಗಳಿಗೆ ವಿಸ್ತರಣೆಯಾಗಲು ಈ ವಿದ್ಯಾರ್ಥಿ ತುಳು ಸಮ್ಮೇಳನ ಸಹಕಾರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಮಾತನಾಡಿ, ತುಳು ಭಾಷೆ ನಮ್ಮೆಲ್ಲರ ಮಾತೃ ಭಾಷೆಯಾಗಿದ್ದು, ಭಾಷೆಯ ಬಗ್ಗೆ ಅಭಿಮಾನ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು.
ತುಳು ಪರಿಷತ್ ಗೌರವಾಧ್ಯಕ್ಷ ಡಾ. ಪ್ರಭಾಕರ್ ನೀರುಮಾರ್ಗ ಮಾತನಾಡಿ, ಪ್ರೌಢ ಶಾಲೆ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ತುಳು ಪಠ್ಯ ಜಾರಿಯಲ್ಲಿದೆ. ಪಿಯುಸಿ ತರಗತಿಯಲ್ಲೂ ತುಳು ಭಾಷೆಯನ್ನು ಅಳವಡಿಸಲು ಸರಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಶಾಲಿನಿ ರೈ, ಅಮಿತ , ರಾಕೇಶ್ ಕುಂದರ್, ರಮೇಶ್ ಮಂಚಕಲ್, ಚಂದ್ರಕಲಾ ರಾವ್ ಉಪಸ್ಥಿತರಿದ್ದರು.
ಎರಡನೇ ಹಂತದ ಈ ಸ್ಪರ್ಧಾ ಕೂಟದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆ ಹಾಗೂ ತುಳು ಸಿನಿಮಾ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು