5:39 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಬಂಟ್ವಾಳ: ಬರಿಮಾರು ಗ್ರಾಪಂ ಸದಸ್ಯ ಸಹಿತ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

04/04/2023, 20:33

ಬಂಟ್ವಾಳ(reporterkarnataka.com):
ಬರಿಮಾರು ಗ್ರಾಪಂ ಪಕ್ಷೇತರ ಸದಸ್ಯ ಹರಿಕೃಷ್ಣ ಬರಿಮಾರು, ಗುರುಪ್ರಸಾದ್, ಶರತ್,ಲತೀಶ್, ಯಶೋಧರ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಅವರಿಗೆ ಪಕ್ಷದ ಶಾಲು ಹಾಕಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಬರಮಾಡಿಕೊಂಡರು.
ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಹರಿಕೃಷ್ಣ ಬರಿಮಾರು ಅವರು ಕಳೆದ ಗ್ರಾಪಂ ಚುನಾವಣಾ ಸಂದರ್ಭದಲ್ಲಿ ಪಕ್ಷದಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿ ಅ ಬಳಿಕ ದ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ದೂರ ಇದ್ದರು. ಆದರೆ 2023ರ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರ ಅಭಿವೃದ್ಧಿಯನ್ನು ಹಾಗೂ ಪಕ್ಷದ ಮೇಲಿನ ಅಭಿಮಾನದಿಂದ ಮತ್ತೆ ಬಿಜೆಪಿಯತ್ತ ಮುಖಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಪ್ರಮುಖರಾದ ಸುದರ್ಶನ ಬಜ, ರವೀಶ್ ಶೆಟ್ಟಿ ಕರ್ಕಳ, ಗಣೇಶ್ ರೈ ಮಾಣಿ, ರಮನಾಥ ರಾಯಿ, ಪ್ರಕಾಶ್ ಆಂಚನ್, ಮೋಹನ್ ಪಿ.ಎಸ್.ಕಮಲಾಕ್ಷಿ ಪೂಜಾರಿ, ಸದಾಶಿವ ಬರಿಮಾರು,ಜಯಂತ್ ಮುಳಿಬೈಲು, ದಿನೇಶ್ ಶೆಟ್ಟಿ ದಂವೆದಾರ್, ಯಶೋಧರ ಕರ್ಬೆಟ್ಟು ಉದಯ ಕಾಂಜಿಲ, ಅಜಿತ್ ಶೆಟ್ಟಿ ಕಾವಳಮೂಡೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು