3:08 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ

07/01/2023, 19:40

ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು
ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್‌ ಕುಂದರ ಅವರ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಜ.3ರಂದು ಆನಂದ ಅವರು ಮೀನುಗಾರಿಕೆಗೆ ಬೋಟ್ ನಲ್ಲಿ ತೆರಳಿದ್ದರು. ಬಳಿಕ ಬೋಟ್ ದಡಕ್ಕೆ ಬಂದು ನಿಂತುಕೊಂಡಿತ್ತು. ಈ ವೇಳೆ ಆನಂದ ಅವರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.‌ಎಷ್ಟು ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ಜ.6ರಂದು ಕಾಪು ಬಳಿ ಸಮುದ್ರದಲ್ಲಿ ವ್ಯಕ್ತಿ ಮೃತದೇಹ ಸಿಕ್ಕಿದ್ದು, ಬಳಿಕ ಅದನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದಲ್ಲಿ ಇರಿಸಲಾಗಿತ್ತು. ಸಮುದ್ರದಲ್ಲಿ ಮೃತದೇಹ ಸಿಕ್ಕಿರುವ ಬಗ್ಗೆ ನಾಪತ್ತೆಯಾಗಿದ್ದ ಆನಂದ ಅವರ ಪತ್ನಿಗೂ ಮಾಹಿತಿ‌ ನೀಡಲಾಗಿತ್ತು. ಅವರು ಸಂಬಂಧಿಕರೊಂದಿಗೆ ಬಂದು ನೋಡಿದಾಗ ಮೃತದೇಹವೂ ಗಂಡ ಆನಂದ ಅವರದೆಂದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು