8:05 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಬೊಕ್ಕಪಟ್ಣ ಬೆಂಗ್ರೆ: 80 ಲಕ್ಷ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ

17/11/2022, 18:52

ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಬೆಂಗ್ರೆ ವಾರ್ಡಿನ ಬೊಕ್ಕಪಟ್ಣ ಬೆಂಗ್ರೆಯಲ್ಲಿ 80 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗ್ರೆ ಪ್ರದೇಶವು ನಗರಕ್ಕಿಂತ ಭಿನ್ನವಾಗಿರುವ ಕಾರಣ ಹೆಚ್ಚಿನ ಅಭಿವೃದ್ಧಿಯ ಅಗತ್ಯವಿದೆ. ಈಗಾಗಲೇ ಬೆಂಗ್ರೆಯ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಮತ್ತಷ್ಟು ಅನುದಾನಗಳನ್ನು ಒದಗಿಸಿ ಸಾರ್ವಜನಿಕರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ಬೊಕ್ಕಪಟ್ಣ ಬೆಂಗ್ರೆಯ ಗುರುಪುರ ನದಿಯ ಪಶ್ಚಿಮ ದಂಡೆಯಲ್ಲಿರುವ ರಸ್ತೆಗೆ ಸಂರಕ್ಷಣಾ ತಡೆಗೋಡೆ ನಿರ್ಮಿಸುವ ಕುರಿತು ಸ್ಥಳೀಯ ಕಾರ್ಪೋರೇಟರ್ ಹಾಗೂ ಕಾರ್ಯಕರ್ತರ ಬೇಡಿಕೆಯಂತೆ ಕಾಮಗಾರಿಗೆ 80 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಅಧ್ಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗ್ರೆ ಪರಿಸರದ ಜನರು ನಗರವನ್ನು ಸಂಪರ್ಕಿಸಲು ವಿನೂತನ ಯೋಜನೆಗಳನ್ನು ರೂಪಿಸಲಾಗಿದ್ದು ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿಸುವ ಭರವಸೆ ನೀಡುತ್ತೇನೆ ಎಂದು ಹೇಳಿದರು.

ಅನುದಾನ ಬಿಡುಗಡೆಗೊಳಿಸಿದ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಸ್ಥಳೀಯ ನಿವಾಸಿಗಳು ಸನ್ಮಾನಿಸಿ ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು