10:06 PM Thursday4 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ

ಇತ್ತೀಚಿನ ಸುದ್ದಿ

ಬೋಳೂರು: ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನಕ್ಕೆ ನೂತನ ಮೇಲ್ಫಾವಣಿ, ನೆಲಹಾಸು ಕಾಮಗಾರಿಗೆ ಭೂಮಿಪೂಜೆ

04/12/2025, 22:06

ಮಂಗಳೂರು(reporterkarnataka.com): ಪಾಲಿಕೆ ವ್ಯಾಪ್ತಿಯ 27ನೇ ಬೋಳೂರು ವಾರ್ಡಿನ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನಕ್ಕೆ ನೂತನವಾಗಿ ನಿರ್ಮಾಣಗೊಳ್ಳಲಿರುವ ಮೇಲ್ಫಾವಣಿ ಹಾಗೂ ನೆಲಹಾಸು ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.

ನಂತರ ಮಾತನಾಡಿದ ಶಾಸಕರು, ಇಲ್ಲಿನ ದೈವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಕೆಲವು ಅಭಿವೃದ್ಧಿ ಕಾರ್ಯಗಳು ಅಗತ್ಯವಾಗಿ ನಡೆಯಬೇಕಾಗಿದ್ದು ಆ ಬಗ್ಗೆ ಸ್ಥಳೀಯ ಬಿಜೆಪಿ ಪ್ರಮುಖರು, ದೇವಸ್ಥಾನಕ್ಕೆ ಸಂಬಂಧಪಟ್ಟವರು ಮಾಡಿದ ಮನವಿಯಂತೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ವಾರ್ಡ್ ಅಧ್ಯಕ್ಷರಾದ ದಿನೇಶ್, ಸ್ಥಳೀಯ ಪ್ರಮುಖರಾದ ಮೋಹನ್ ಬರ್ಕೆ, ರಘು ಶೆಟ್ಟಿ, ರವೀಂದ್ರ ಆಚಾರಿ, ರವೀಂದ್ರ ಶೆಣೈ, ವಿಜೇಂದ್ರ ಸಾಲ್ಯಾನ್, ತಿಲಕ್ ರಾಜ್ ಕೋಟ್ಯಾನ್, ಭಾಸ್ಕರ ಚಂದ್ರ ಶೆಟ್ಟಿ, ಸದಾಶಿವ ಪೂಜಾರಿ, ದಾಮೋದರ ಶೆಟ್ಟಿ, ಸಂದೀಪ್ ಪೂಜಾರಿ, ಗೌತಮ್ ಸುವರ್ಣ, ವಿಶಾಲ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು