10:30 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಬೋಳೂರಿನಲ್ಲಿ ಮಹಿಳೆಯರಿಗೆ ಬೃಹತ್ ಆರೋಗ್ಯ ಮೇಳ: ತಜ್ಞ ವೈದ್ಯರಿಂದ ತಪಾಸಣೆ

19/03/2023, 00:02

ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯದ ಆವರಣದಲ್ಲಿ ಭಾನುವಾರ ಮಾರ್ಚ್ 19ರಂದು ಮಹಿಳೆಯರಿಗೆ ಬೃಹತ್ ಉಚಿತ ಆರೋಗ್ಯ ಮೇಳ ಜರುಗಲಿದೆ.
ಅಮೃತ ಧ್ವನಿ, ಮಾತಾ ಅಮೃತಾನಂದಮಯಿ ಮಠದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ.,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಆಯುಷ್ ಇಲಾಖೆ , ದೇರಳಕಟ್ಟೆಯ ಏನಪೋಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ರೋಟರಿ ಕ್ಲಬ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ತಜ್ಞ ವೈದ್ಯರು ಮತ್ತು ಆರೋಗ್ಯ ಸೇವಾರ್ಥಿಗಳು ಕಣ್ಣಿನ ಚಿಕಿತ್ಸೆ, ಹಲ್ಲಿನ ಚಿಕಿತ್ಸೆ, ಮಹಿಳೆಯರ ಆರೋಗ್ಯ ತಪಾಸಣೆ, ಅಸಾಂಕ್ರಾಮಿಕ ರೋಗಗಳು, ಕ್ಯಾನ್ಸರ್ ತಪಾಸಣೆ,( Mammography, Pap test) , ಹಿರಿಯ ನಾಗರಿಕರ ಆರೋಗ್ಯ ಸಮಸ್ಯೆಗಳು, ವಾತರೋಗ, ಶ್ವಾಸರೋಗ ಇತ್ಯಾದಿ ಪ್ರಮುಖ ಸಮಸ್ಯೆಗಳ ತಪಾಸಣೆ ನಡೆಸಿ ಚಿಕಿತ್ಸಾ ಸಲಹೆ ನೀಡಲಿರುವರು.
ಬೆಳಗ್ಗೆ 9.00 ರಿಂದ ಮಧ್ಯಾಹ್ನ1.00 ಗಂಟೆಯ ತನಕ ಈ ಸೇವೆ ಲಭಿಸಲಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯುವಂತೆ ಮನವಿ.

ಇತ್ತೀಚಿನ ಸುದ್ದಿ

ಜಾಹೀರಾತು