ಇತ್ತೀಚಿನ ಸುದ್ದಿ
ಬೋಳೂರು ವಾರ್ಡ್ ಬಿಜೆಪಿ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ: ಖಾಸಗಿ ಆಸ್ಪತ್ರೆಗೆ ದಾಖಲು
05/01/2024, 00:30
ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಇರಿಸಲಾಗಿದೆ.
ಬೋಳೂರು ವಾರ್ಡ್ ನ ಕಾರ್ಪೋರೇಟರ್ ಆಗಿರುವ ಜಗದೀಶ್ ಶೆಟ್ಟಿ ಅವರು ನಗರದ ಸ್ಟೇಟ್ ಬ್ಯಾಂಕ್ ಬಳಿ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ವೀಳ್ಯದೆಲೆಗೆ ಸಿಂಪಡಿಸುವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಇದನ್ನು ಗಮನಿಸಿದ ಪೊಲೀಸರು ಹಾಗೂ ಸಾರ್ವಜನಿಕರು ಕಾರಿನ ಗಾಜು ಒಡೆದು ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಜಗದೀಶ ಶೆಟ್ಟಿ ಅವರನ್ನು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ಇರಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಜಗದೀಶ್ ಶೆಟ್ಟಿ ಅವರು ಶಾಸ್ತ್ರೀಯ ಹಾಗೂ ಕರ್ನಾಟಕ ಸಂಗೀತಗಾರನಾಗಿದ್ದು, ಆರ್ಕೆಸ್ಟ್ರಾ ತಂಡದಲ್ಲಿ ಹಾಡುತ್ತಿದ್ದರು.
ಹಳೆಯ ಹಿಂದಿ ಚಲನಚಿತ್ರ ಗೀತೆಗಳನ್ನು ಹಾಡುವುದರಲ್ಲಿ ಅವರು ಪ್ರಸಿದ್ಧರಾಗಿದ್ದರು.