ಇತ್ತೀಚಿನ ಸುದ್ದಿ
ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಕೇಂದ್ರ ಸರಕಾರವೇ ಉತ್ತರ ನೀಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
11/11/2025, 12:31
ಮೈಸೂರು(reporterkarnataka.com): ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್ ಗಳು ಆಗುತ್ತಿವೆ ? ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದರು.
ಪತ್ರಕರ್ತರ ಈ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಬಾಂಬ್ ಬ್ಲಾಸ್ಟ್ ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ.
ಭಾರತವನ್ನು ಒಂದು ಧರ್ಮದ ದೇಶ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಭಾರತ ಸಂವಿಧಾನಬದ್ಧ ಬಹುತ್ವದ ದೇಶ ಎಂದರು.
*ಪತ್ರಿಕಾಗೋಷ್ಠಿಯ ಇತರೆ ಹೈಲೈಟ್ಸ್…:*
*ನಾನು ಮೈಸೂರು ಜಿಲ್ಲೆಯವನೇ ಆಗಿರುವುದರಿಂದ ನಾನೇ KDP ಸಭೆ ನಡೆಸ್ತೇನೆ.
*ಪೊಲೀಸ್ ಅಧಿಕಾರಿಗಳಾಗಳು ಘಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು*
*ಅಪರಾಧಿಗಳು, ರಿಯಲ್ ಎಸ್ಟೇಟ್, ರೌಡಿಗಳನ್ನು ಹೊರತುಪಡಿಸಿ ಪೊಲೀಸರು ಸಾರ್ವಜನಿಕರ ಜೊತೆ ಉತ್ತಮವಾಗಿ ವರ್ತಿಸಬೇಕು.
ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಮಿತಿ ರಚಿಸಲಾಗಿದೆ ಎಂದರು.
ಗ್ರೇಟರ್ ಮೈಸೂರು ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ. ಇನ್ನಷ್ಟು ಸಮಗ್ರ ಚರ್ಚೆ ಬಳಿಕ ಕ್ಯಾಬಿನೆಟ್ ನಲ್ಲಿ ಇಟ್ಟು ಅಲ್ಲೂ ಚರ್ಚಿಸಲಾಗುವುದು. ಕ್ಯಾಬಿನೆಟ್ ತೀರ್ಮಾನದಂತೆ ನಿರ್ಧಾರ ಮಾಡಲಾಗುವುದು ಎಂದರು.
ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ.
ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ.
ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಸರಿಯಲ್ಲ.
ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪರ‍್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಎಂದು ತಿಳಿಸಿದ್ದೇನೆ.
ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು.
ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ಬರ‍್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿರಲಿಲ್ಲ. “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ
ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
ಇನ್ಸ್‌ಪೆಕ್ಟರ್‌ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ ಎಂದು ಸೂಚಿಸಿದ್ದೇನೆ.
ಹಾಸ್ಟೆಲ್‌ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಲು ಸೂಚಿಸಿದ್ದೇನೆ.
*ರಾಜ್ಯದಲ್ಲಿ ಮತ್ತು ಮೈಸೂರು ಜಿಲ್ಲೆಯಲ್ಲೂ ಉತ್ತಮ ಮಳೆ ಆಗಿದೆ. ಕೃಷಿ ಚಟುವಟಿಗೆ ತೊಂದರೆ ಇಲ್ಲ. ಕುಡಿಯುವ ನೀರಿಗೂ ತೊಂದರೆ ಆಗುವುದಿಲ್ಲ. ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚು ನೀರು ಬಿಡಲಾಗಿದೆ.












