ಇತ್ತೀಚಿನ ಸುದ್ದಿ
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ: ಆರೋಪಿ ಭಟ್ಕಳ ನಿವಾಸಿಯ ಬಂಧನ
03/03/2026, 22:02
ಮಂಗಳೂರು(reporterkarnataka.com): ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ನಡೆಸುವುದಾಗಿ ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಬರಹ ಹಾಕಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
“Support madi bro Ullal masjid hathira bomb blast madthini” ಎಂದು ಸಾಮಾಜಿಕ ಜಾಲತಾಣದಲ್ಲಿ ಬರಹ ಹಾಕಿ ಮೂಲಕ ಧರ್ಮಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸು ಉಂಟುಮಾಡಿ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 41/2026 ಅಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299 ಹಾಗೂ 353(2) ಅನ್ವಯ ಪ್ರಕರಣ ದಾಖಲಾಗಿದೆ.
ಇಂದು (03-03-2026) ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಪ್ರಕರಣದ ಆರೋಪಿಯಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ದೇವಿನಗರ ನಿವಾಸಿಯಾದ ಶಂಕರ್ ಮಸ್ತಪ್ಪ ಮೊಗೆರ್ (35) ಎಂಬಾತನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ನಗರದ ಮಾನ್ಯ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.












