4:26 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ: ಆರೋಪಿ ಭಟ್ಕಳ ನಿವಾಸಿಯ ಬಂಧನ

03/03/2026, 22:02

ಮಂಗಳೂರು(reporterkarnataka.com): ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ನಡೆಸುವುದಾಗಿ ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಬರಹ ಹಾಕಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
“Support madi bro Ullal masjid hathira bomb blast madthini” ಎಂದು ಸಾಮಾಜಿಕ ಜಾಲತಾಣದಲ್ಲಿ ಬರಹ ಹಾಕಿ ಮೂಲಕ ಧರ್ಮಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸು ಉಂಟುಮಾಡಿ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 41/2026 ಅಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299 ಹಾಗೂ 353(2) ಅನ್ವಯ ಪ್ರಕರಣ ದಾಖಲಾಗಿದೆ.
ಇಂದು (03-03-2026) ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಪ್ರಕರಣದ ಆರೋಪಿಯಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ದೇವಿನಗರ ನಿವಾಸಿಯಾದ ಶಂಕರ್ ಮಸ್ತಪ್ಪ ಮೊಗೆರ್ (35) ಎಂಬಾತನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ನಗರದ ಮಾನ್ಯ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು