8:33 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟ ರಚನೆಗೆ ಆ. 5ರಂದು ಮುಹೂರ್ತ ಫಿಕ್ಸ್?: ದ.ಕ.ಜಿಲ್ಲೆಯಿಂದ ಅಂಗಾರರಿಗೆ ಮತ್ತೆ ಸಚಿವ ಸ್ಥಾನ? 

01/08/2021, 21:06

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಚೊಚ್ಚಲ ಸಂಪುಟ ಆ. 5ರಂದು ಬಹುತೇಕ ರಚನೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಎಸ್. ಅಂಗಾರ ಅವರಿಗೆ ಮತ್ತೆ ಸಚಿವ ಪದವಿ ದೊರೆಯುವುದು ನಿಚ್ಚಳವಾಗಿದೆ. ಅದೇ ರೀತಿ ನೆರೆಯ ಉಡುಪಿ ಜಿಲ್ಲೆಯಿಂದ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.

ಬೊಮ್ಮಾಯಿ ಸಂಪುಟದಲ್ಲಿ ಮೂವರು ಡಿಸಿಎಂಗಳಿರುತ್ತಾರೆ. ಆರ್. ಅಶೋಕ್, ಗೋವಿಂದ ಕಾರಜೋಳ ಹಾಗೂ ಶ್ರೀರಾಮುಲು ಅವರಿಗೆ ಡಿಸಿಎಂ ಪಟ್ಟ ಒಲಿಯುವ ಸಾಧ್ಯತೆಗಳಿವೆ. ಸಂಘ ಪರಿವಾರದಿಂದ ಬಂದ, ಹಿರಿತನಕ್ಕೆ ಹೆಸರಾದ ಎಸ್ .ಅಂಗಾರ ಅವರಿಗೆ ಮತ್ತೊಮ್ಮೆ ಅವಕಾಶ ಲಭಿಸಲಿದೆ. ಸುರೇಶ್ ಕುಮಾರ್, ಮುರುಗೇಶ್ ನಿರಾಣಿ ಮತ್ತೆ ಮಂತ್ರಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ. ಹೊಸ ಮುಖಗಳಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೊಡಗಿನ ಅಪ್ಪಚ್ಚು ರಂಜನ್, ಮೂಡುಗೆರೆಯ ಕುಮಾರಸ್ವಾಮಿ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನಿಂದ ಈ ಬಾರಿ ಎ. ರಾಮದಾಸ್ ಸಚಿವ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು