3:51 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ -ಶಾ ಭೇಟಿ ಅಂತ್ಯ: ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ; ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಮುಖ್ಯಮಂತ್ರಿ

11/05/2022, 19:28

ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ ಬೀಳುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಲು ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರ ಜತೆ ನಡೆದ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸಾಗಿದ್ದಾರೆ.

ಬೊಮ್ಮಾಯಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಸಮ್ಮುಖದಲ್ಲಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಮಾತುಕತೆ ನಡೆಸಿದರು. ಎಲ್ಲವನ್ನು ಆಲಿಸಿದ ಅಮಿತ್ ಶಾ ನೀವು ರಾಜ್ಯಕ್ಕೆ ವಾಪಸ್​ ತೆರಳಿ, ನಾವು ಈ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಮತ್ತೊಮ್ಮೆ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

ಅಮಿತ್ ಶಾ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ರಾಜಕೀಯ ವಿದ್ಯಮಾನಗಳು, ಸ್ಥಿತಿಗತಿಗಳು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗಿದೆ .

ನಿನ್ನೆ ಸುಪ್ರೀಂಕೋರ್ಟ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ನೀಡಿರುವ ಆದೇಶ, ಅದರ ಪರಿಣಾಮಗಳೇನು? ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ಸೇರಿದಂತೆ ಎಲ್ಲವೂ ಕೂಡ ಚರ್ಚೆಯಾಗಿದೆ. ನಾವು ಎಲ್ಲವನ್ನೂ ಅವರಿಗೆ ತಿಳಿಸಿದ್ದು, ಸುದೀರ್ಘವಾಗಿ ಕೇಳಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೊತೆ ಮಾತನಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. 2-3 ದಿನಗಳ ಬೆಳವಣಿಗೆ ಆಧಾರದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು