ಇತ್ತೀಚಿನ ಸುದ್ದಿ
ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು 138 ಮಂದಿ ಅಸ್ವಸ್ಥಗೊಂಡ ಪ್ರಕರಣ: ಆರೋಗ್ಯ ಇಲಾಖೆಯ ಕೈಸೇರಿದ ಪ್ರಯೋಗಾಲಯ ವರದಿ
01/05/2024, 19:03
ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣಕ್ಕೆ
ಸಂಬಂಧಿಸಿದಂತೆ ಪ್ರಯೋಗಾಲಯ ಪರೀಕ್ಷಾ ವರದಿ ಹೊರಬಂದಿದ್ದು, ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿ ತಿಳಿಸಿದೆ.
ಈ ವರದಿ ಇದೀಗ ಜಿಲ್ಲಾ ಆರೋಗ್ಯ ಇಲಾಖೆಯ ಕೈಸೇರಿದೆ. ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ತಿಳಿದು ಬಂದಿದೆ.
ಏಪ್ರಿಲ್ 9ರಂದು ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ
138 ಮಂದಿ ವಾಂತಿಬೇಧಿಯಿಂದ ಅಸ್ವಸ್ಥಗೊಂಡಿದ್ದರು.
ಪ್ರಕರಣದ ಗಂಭೀರತೆಯನ್ನು ಅರಿತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ
ಘಟನೆ ನಡೆದ ಎರಡು ದಿನಗಳ ಪ್ರಯೋಗಾಲಯ ಪರೀಕ್ಷೆಯ ವರದಿ ಎ.22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಜೊತೆಗೆ ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ
ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯ
ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ
ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ
ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ
ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ
ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ
ತಿಳಿಸಿದ್ದಾರೆ.