ಇತ್ತೀಚಿನ ಸುದ್ದಿ
ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ: ಸಿದ್ಧತಾ ಕಾರ್ಯ ಪರಿಶೀಲಿಸಿದ ಸ್ಪೀಕರ್ ಖಾದರ್
26/02/2025, 13:38

ಬೆಂಗಳೂರು(reporterkarnataka.com): ವಿಧಾನ ಸಭೆ ವತಿಯಿಂದ ಪ್ರಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳದ ಸಿದ್ಧತಾ ಕಾರ್ಯವನ್ನು ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.