3:44 PM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಪ್ರಾದೇಶಿಕ ಬೆಳವಣಿಗೆಗೆ ಉತ್ತೇಜನ: 2,482 ಸ್ಥಳೀಯ ಬ್ಯಾಂಕ್ ಅಧಿಕಾರಿಗಳ ನೇಮಕಕ್ಕೆ ಬ್ಯಾಂಕ್ ಆಫ್ ಬರೋಡಾ ಸಿದ್ದತೆ

05/09/2026, 19:00

ಮಂಗಳೂರು(reporterkarnataka.com): ತಳಮಟ್ಟದ ಬ್ಯಾಂಕಿಂಗ್ ಸೇವೆಯನ್ನು ಬಲಪಡಿಸಲು ಮತ್ತು ಸ್ಥಳೀಯ ಉದ್ಯೋಗ ಸೃಷ್ಟಿಗೆ ಒತ್ತು ನೀಡಲು ಬ್ಯಾಂಕ್ ಆಫ್ ಬರೋಡಾ ಬೃಹತ್ ನೇಮಕಾತಿ ಅಭಿಯಾನವನ್ನು ಪ್ರಕಟಿಸಿದೆ. ಬ್ಯಾಂಕ್ ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್-1 (JMG/S-I) ನಲ್ಲಿ ಒಟ್ಟು 2,482 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು (LBO) ನಿಯಮಿತ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಒಡಿಶಾ ಸೇರಿದಂತೆ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ನೇಮಕಾತಿ ನಡೆಯಲಿದೆ.
ಈ ನೇಮಕಾತಿಯ ಪ್ರಮುಖ ವಿಶೇಷವೆಂದರೆ ರಾಜ್ಯ-ಕೇಂದ್ರಿತ ನಿಯೋಜನೆ. ಆಯ್ಕೆಯಾದ ಅಧಿಕಾರಿಗಳು ಅವರು ಅರ್ಜಿ ಸಲ್ಲಿಸಿದ ರಾಜ್ಯದಲ್ಲಿಯೇ ಮೊದಲ 12 ವರ್ಷಗಳ ಕಾಲ ಅಥವಾ SMGS-IV ಗ್ರೇಡ್‌ಗೆ ಬಡ್ತಿ ಪಡೆಯುವವರೆಗೆ, ಯಾವುದು ಮೊದಲೋ ಅಲ್ಲಿಯವರೆಗೆ ಸೇವೆ ಸಲ್ಲಿಸಬೇಕಾಗುತ್ತದೆ. ಇದರಿಂದ ಸ್ಥಳೀಯ ಭಾಷಾ ಪ್ರಾವೀಣ್ಯತೆ, ಸಾಂಸ್ಕೃತಿಕ ಅರಿವು ಮತ್ತು ಸ್ಥಳೀಯ ಮಾರುಕಟ್ಟೆ ಜ್ಞಾನವುಳ್ಳ ಸಿಬ್ಬಂದಿಯನ್ನು ರೂಪಿಸುವುದು ಬ್ಯಾಂಕ್‌ನ ಉದ್ದೇಶವಾಗಿದೆ.
ಈ ಕ್ರಮದಿಂದ ಗ್ರಾಹಕರೊಂದಿಗಿನ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದ್ದು, ಸೇವಾ ಗುಣಮಟ್ಟ ಹೆಚ್ಚಲಿದೆ. ಜೊತೆಗೆ ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ವೃತ್ತಿ ಅವಕಾಶ ದೊರೆಯಲಿದೆ ಎಂದು ಬ್ಯಾಂಕ್ ತಿಳಿಸಿದೆ.
ಈ ಕುರಿತು ಮಾತನಾಡಿದ ಕಾರ್ಯನಿರ್ವಾಹಕ ನಿರ್ದೇಶಕ ಲಾಲ್ ಸಿಂಗ್, “ಈ ನೇಮಕಾತಿ ಅಭಿಯಾನವು ನಮ್ಮ ಸಿಬ್ಬಂದಿ ವರ್ಗದಲ್ಲಿನ ಹೂಡಿಕೆಯಷ್ಟೇ ಅಲ್ಲ, ನಾವು ಸೇವೆ ಸಲ್ಲಿಸುವ ಸಮುದಾಯಗಳಲ್ಲಿನ ಹೂಡಿಕೆಯೂ ಆಗಿದೆ. ಸ್ಥಳೀಯ ಅರಿವುಳ್ಳ ಯುವ ವೃತ್ತಿಪರರನ್ನು ಸೇರ್ಪಡೆಗೊಳಿಸುವ ಮೂಲಕ ಗ್ರಾಹಕರ ಅಗತ್ಯಗಳಿಗೆ ಸ್ಪಂದಿಸುವ ನಮ್ಮ ಸಾಮರ್ಥ್ಯವನ್ನು ಬಲಪಡಿಸುತ್ತಿದ್ದೇವೆ,” ಎಂದರು.

*ಅರ್ಹತಾ ಮಾನದಂಡ:* ಪದವೀಧರರು, ವಯೋಮಿತಿ 21 ರಿಂದ 30 ವರ್ಷ (01.08.2026ಕ್ಕೆ ಅನ್ವಯ), ನಿಗದಿತ ವಾಣಿಜ್ಯ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ ಕನಿಷ್ಠ ಒಂದು ವರ್ಷದ ಅನುಭವ ಮತ್ತು ಅರ್ಜಿ ಸಲ್ಲಿಸಿದ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಕಡ್ಡಾಯ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 7.

ಇತ್ತೀಚಿನ ಸುದ್ದಿ

ಜಾಹೀರಾತು