1:06 AM Tuesday29 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ: ಮತ್ತೊಮ್ಮೆ ಅವಕಾಶ

17/10/2023, 19:07

ಬೆಂಗಳೂರು(reporterkarnataka.com): ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ ಬಳಸಲು ಆಗಲಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16ರಿಂದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.
ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಿಗೆ ಅ.16ರಿಂದ 18ರ ವರೆಗೆ ಅವಕಾಶ ನೀಡಲಾಗಿದೆ.
ಅ. 19 ರಿಂದ 21 ರವರೆಗೆ ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು