ಇತ್ತೀಚಿನ ಸುದ್ದಿ
ಬಿಪಿಎಲ್ ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ವೇದವ್ಯಾಸ ಕಾಮತ್ ಸೂಚನೆ
24/08/2021, 19:22
ಮಂಗಳೂರು(reporterkarnataka.com):
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ಆದಾಯ ಪ್ರಮಾಣಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ನೈಜ್ಯ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಪಿಎಲ್ ನಿಂದ ಎಪಿಎಲ್ ಗೆ ಪರಿವರ್ತನೆಯಾದ ಪಡಿತರ ಚೀಟಿದಾರರ ಸಂಬಂಧಿಸಿದ ಗ್ರಾಮಕರಣಿಕರಿಗೆ ನೀಡಲು ಸೂಚನೆ ನೀಡಿದರು. ಹಾಗೂ ಅವರಿಂದ ಸದರು ಪಡಿತರ ಚೀಟಿದಾರರ ಆದಾಯ ದೃಢಪತ್ರವನ್ನು ಪರಿಷ್ಕರಿಸಿ ಆಹಾರ ಇಲಾಖೆಗೆ ವರದಿ ಸಲ್ಲಿಸುವಂತೆ ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.