4:31 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

27/04/2026, 23:14

ಮಂಗಳೂರು(reporterkarnataka.com): ಇಲ್ಲಿನ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್ ಗೇಟ್ ಸಂಪೂರ್ಣ ಮುಚ್ಚಲು ಆಗ್ರಹಿಸಿ ಏಪ್ರಿಲ್‌ 28ರಂದು ಬೃಹತ್‌ ಜನಾಂದೋಲನ ನಡಿಗೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್‌ ನಾಯಕರು, ಟೋಲ್‌ ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಎಚ್ಚರಿಸಿದ್ದಾರೆ.
ಗುರುಪುರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ. ರೋಡ್‌ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ವರೆಗೆ ಜನಾಂದೋಲನ ನಡಿಗೆ ನಡೆಯಲಿದ್ದು, ಈ ಹೋರಾಟದಲ್ಲಿ ಎಲ್ಲರೂ ಕೈ ಜೋಡಿಸಬೇಕು’ ಎಂದು ಮನವಿ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್‌ ಅಲಿ ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಎಚ್ಚೆತ್ತು ಈ ಟೋಲ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ನಿಯಮಾವಳಿ ಉಲ್ಲಂಘನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ಸುಂಕ ವಸೂಲಾತಿ ಶಾಶ್ವತ ಮುಚ್ಚುವತನಕ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.


ಈ ಸಂದರ್ಭದಲ್ಲಿ ಗುರುಪುರ ಕಾಂಗ್ರೆಸ್‌ ಅಧ್ಯಕ್ಷರಾದ ಬಿ.ಎಲ್.ಪಿ. ಪದ್ಮನಾಭ ಕೋಟ್ಯಾನ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕೆಪಿಸಿಸಿ ಸದಸ್ಯ ಆರ್.ಕೆ.ಪೃಥ್ವಿರಾಜ್‌, ಬುಡಾ ಅಧ್ಯಕ್ಷ ಬೇಬಿ ಕುಂದರ್, ಕೃಷ್ಣ ಅಮೀನ್, ಭಾಷ ಗುರುಪುರ, ಮೊಹಮ್ಮದ್ ಉಂಙ, ಅಬ್ದುಲ್ ಮಜೀದ್ ಸೂರಲ್ಪಾಡಿ, ಗಣೇಶ್ ಪೂಜಾರಿ, ಮಾಲತಿ ಗಂಜೀಮಠ, ಯಶವಂತ ಶೆಟ್ಟಿ, ಸುನೀಲ್ ಪೂಜಾರಿ, ಜಯಂತಿ ವಾಮಂಜೂರು, ಭಾಷ ಮಾಸ್ಟರ್, ಚಂದ್ರಹಾಸ ಶೆಟ್ಟಿ, ದಯಾನಂದ ಶೆಟ್ಟಿ, ಶರೀಫ್ ಕನ್ನಿಬೆಟ್ಟು, ರೊನಾಲ್ಡ್ ಅಡ್ಯಾರ್, ಕೀರ್ತಿರಾಜ್, ಶ್ರೀಧರ್, ಮೋಹನ್ ಕರ್ಕೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು