9:31 AM Saturday18 - January 2025
ಬ್ರೇಕಿಂಗ್ ನ್ಯೂಸ್
ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ…

ಇತ್ತೀಚಿನ ಸುದ್ದಿ

ಬ್ರ್ಯಾಂಡ್ ಮಂಗಳೂರು ಉತ್ತಮ ಪರಿಕಲ್ಪನೆ: ಪೊಲೀಸ್ ಕಮಿಷನರ್ ಕುಲದೀಪ್ ಆರ್ ಜೈನ್ ಶ್ಲಾಘನೆ

01/07/2023, 23:49

ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್‌ ಮಂಗಳೂರು ಪ್ರಶಸ್ತಿಯನ್ನು ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್‌ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌ ಅವರಿಗೆ ಪ್ರದಾನ ಮಾಡಲಾಯಿತು.



ಪತ್ರಿಕಾಭವನದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಪೊಲೀಸ್‌ ಕಮಿಷನರ್‌ ಕುಲದೀಪ್‌ ಆರ್. ಜೈನ್‌ ಕಾರ್ಯಕ್ರಮ ಉದ್ಘಾಟಿಸಿ ಮಂಗಳೂರಿನ ನೈಜ ಪರಂಪರೆಯನ್ನು ಸೌಹಾರ್ದತೆಯನ್ನು ಹೊರಜಗತ್ತಿಗೆ ತೆರೆದಿಡುವ ನಿಟ್ಟಿನಲ್ಲಿ ಬ್ರ್ಯಾಂಡ್ ಮಂಗಳೂರು ಉತ್ತಮ ಪರಿಕಲ್ಪನೆ. ಪತ್ರಿಕಾ ದಿನಾಚರಣೆಯ ಜೊತೆ ವ್ಯಂಗ್ಯ ಚಿತ್ರ ಪ್ರದರ್ಶನ, ಜೊತೆಗೆ ವಿದ್ಯಾರ್ಥಿಗಳನ್ನು ಪಾಲ್ಗೊಳ್ಳುವಂತೆ ಮಾಡಿರುವುದು ಶ್ಲಾಘನೀಯ ಎಂದರು.
ಆಕಾಶವಾಣಿ ನಿವೃತ್ತ ಕಾರ್ಯಕ್ರಮ ನಿರ್ವಹಣಾ ಧಿಕಾರಿ ಡಾ.ಸದಾನಂದ ಪೆರ್ಲ ಅವರು ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು . ಸಮುದಾಯದ ಸಮಸ್ಯೆಗಳು ರೈತರ ಜನ ಸಾಮಾನ್ಯರ ಬಗ್ಗೆ ಹೆಚ್ಚು ಗಮನಹರಿಸುವುದು ಅಭ್ಯುದಯ ಪತ್ರಿಕೋದ್ಯಮದ ಭಾಗ ಎಂದು ಡಾ.ಸದಾನಂದ ಪೆರ್ಲ ತಿಳಿಸಿದ್ದಾರೆ.
ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ಅಭ್ಯುದಯ ಪತ್ರಿಕೋದ್ಯಮ ಮುಖ್ಯ ಗುರಿ. ಪತ್ರ ಕರ್ತರ ಗ್ರಾಮ ವಾಸ್ತವ್ಯ,ಕುಗ್ರಾಮ ಗುರುತಿಸುವಿಕೆ, ಸಮಾಜ ಮುಖಿ ಕೆಲಸಗಳು ಜನಸಾಮಾನ್ಯರ ಧ್ವನಿ ಯನ್ನು ರಾಜಕಾರಣಿಗಳಿಗೆ ತಲುಪಿಸು ವುದು ಅಭ್ಯುದಯ ಪತ್ರಿಕೋದ್ಯಮದ ಆಶಯವಾಗಿದೆ. ಅಭ್ಯುದಯ ಪತ್ರಿಕೋದ್ಯಮದ ವಿಷಯಗಳು ಪ್ರಚಲಿತ ಮಾಧ್ಯಮ ಗಳಲ್ಲಿ ಅಗ್ರಸ್ಥಾನ ಪಡೆಯಬೇಕಾಗಿದೆ. ನಾವು ಓದುಗರ, ಕೇಳುಗರ ಅಭಿರುಚಿಯನ್ನು ಅಭಿವೃದ್ಧಿ ಪತ್ರಿಕೋದ್ಯಮದತ್ತ ಆಕರ್ಷಿ ಸುವಂತೆ ಮಾಡಬೇಕಾಗಿದೆ ಎಂದು ಸದಾನಂದ ಪೆರ್ಲ ತಿಳಿಸಿದ್ದಾರೆ.
ಪತ್ರಕರ್ತರು ತೆರೆದ ಕಣ್ಣುಗಳಿಂದ ನಮ್ಮ ಸುತ್ತ ಮುತ್ತಲಿನ ಸಮಾಜವನ್ನು ನೋಡಬೇಕು ಆಗ ಮಾತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾದ ಮಾಧ್ಯಮ ರಂಗಕ್ಕೆ ಮಾನ್ಯತೆ ದೊರೆಯಬಹುದು. ಮಹಾತ್ಮ ಗಾಂಧೀಜಿ ಅಭ್ಯುದಯ ಪತ್ರಿಕೋದ್ಯಮದ ದೊಡ್ಡ ಹರಿಕಾ ರರಾಗಿದ್ದರು. ದೇಶ ಸೇವೆ, ಜನರ ಸೇವೆಗೆ ಒತ್ತು ನೀಡುವುದು ಅಭ್ಯುದಯ ಪತ್ರಿಕೋದ್ಯಮದ ಗುರಿಯಾಗಿದೆ ಎಂದು ಸದಾನಂದ ಪೆರ್ಲ ತಿಳಿಸಿದ್ದಾರೆ.


ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ, ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್, ಜಿಲ್ಲಾ ವಾರ್ತಾಧಿಕಾರಿ ರವಿರಾಜ್, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್‌, ರಾಜ್ಯ ಸಮಿತಿ ಸದಸ್ಯ ಜಗನ್ನಾಥ್‌ ಶೆಟ್ಟಿ ಬಾಳ, ರಾಜ್ಯ ಸಮಿತಿ ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಅಡ್ಕಸ್ಥಳ,ಮಂಗಳೂರು ಪ್ರೆಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಉಪಸ್ಥಿತರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಮತ್ತು ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಪ್ರಶಸ್ತಿ ವಿಜೇತರ ಸನ್ಮಾನ ಪತ್ರ ವಾಚಿಸಿ ದರು.ಮಹಮ್ಮದ್‌ ಆರಿಫ್‌ ಕಾರ್ಯಕ್ರಮ ನಿರೂ ಪಿಸಿದರು.ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆಯ ನಿವೃತ್ತ ಸಿಬ್ಬಂದಿ ಪೂವಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪತ್ರಿಕಾ ದಿನಾಚರಣೆ ಯ ಅಂಗವಾಗಿ ಪತ್ರಿಕಾ ಭವನದಲ್ಲಿ ಖ್ಯಾತ ವ್ಯಂಗ್ಯ ಚಿತ್ರ ಕಲಾವಿದ ಜಾನ್ ಚಂದ್ರ ನ್ ಅವರ ವ್ಯಂಗ್ಯ ಚಿತ್ರ, ರೇಖಾಚಿತ್ರ ಗಳ ಪ್ರದರ್ಶನ ವನ್ನು ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು