2:03 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಬೆಂಗಳೂರಿನ 9 ಅಧಿಕಾರಿಗಳ ಕಚೇರಿ, ನಿವಾಸದ ಮೇಲೆ ದಾಳಿ

22/03/2022, 20:36

ಬೆಂಗಳೂರು(reporterkarnataka.com): ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮತ್ತೆ ಭ್ರಷ್ಟತೆ ಭೇಟೆಗಿಳಿದಿದೆ. ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

ಎಸಿಬಿ ಬೆಂಗಳೂರು ನಗರ ತಂಡ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ. ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ.

ಯಾರ ಯಾರ ಮೇಲೆ ದಾಳಿ?: 

* ರಘು ಬಿ ಎನ್, ಚಾಮರಾಜಪೇಟೆ.

* ಮೋಹನ್, ನೋರಾಯನಪಾಳ್ಯ. ಆರ್.ಟಿ.ನಗರ.

* ಮನೋಜ್, ದೊಮ್ಮಲೂರು.

* ಮುನಿರತ್ನ @ ರತ್ನವೇಲು, ಕೆನಗುಂಟೆ, ಮಲ್ತಳ್ಳಿ.

* ತೇಜು@ತೇಜಸ್ವಿ, ಆರ್ ಆರ್ ನಗರ.

* ಅಶ್ವತ್#ಮುದ್ದಿನಪಾಳ್ಯ ಅಶ್ವತ್, ಕೆಜಿ ಸರ್ಕಲ್, ಮುದ್ದಿನಪಾಳ್ಯ.

* ರಾಮ ಚಾಮುಂಡೇಶ್ವರಿನಗರ, ಬಿಡಿಎ ಬಡಾವಣೆ.

*ಲಕ್ಷ್ಮಣ, ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್.

*ಚಿಕ್ಕಹನುಮ್ಮಯ್ಯ, ಮುದ್ದಿನಪಾಳ್ಯ, ಬೆಂಗಳೂರು.

ಇತ್ತೀಚಿನ ಸುದ್ದಿ

ಜಾಹೀರಾತು