ಇತ್ತೀಚಿನ ಸುದ್ದಿ
ಭ್ರಷ್ಟಾಚಾರದ ವಿರುದ್ಧ ಮುಖ್ಯಮಂತ್ರಿ ನಿವಾಸ ಎದುರು ಧರಣಿ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಬಂಧನ
04/03/2023, 20:23
ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನಾ ಧರಣಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್ ನಾಯಕರನ್ನು ಶನಿವಾರ ಪೊಲೀಸರು ಬಂಧಿಸಿದರು.
ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ಕೂತ ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಸೇರಿಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಧರಣಿ ಕೂತ ಸಿದ್ದರಾಮಯ್ಯ ಅವರನ್ನು ಪೊಲೀಸರು ಬಲವಂತವಾಗಿ ಎಬ್ಬಿಸಿ ಕರೆದೊಯ್ದರು.
ಭ್ರಷ್ಟಾಚಾರಿಗಳನ್ನು ಭ್ರಷ್ಟ ಸರ್ಕಾರ ರಕ್ಷಿಸುತ್ತಿರುವುದು ವ್ಯವಸ್ಥೆಯ ದುರಂತ. ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಮಗನ ಲಂಚಾವತಾರದ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಜ್ವಾಲಾಮುಖಿಯನ್ನು ಬಂಧನದ ಅಸ್ತ್ರದ ಮೂಲಕ ತಣ್ಣಗಾಗಿಸಲು ಸಾಧ್ಯವಿಲ್ಲ. 40% ಬಿಜೆಪಿ ಸರ್ಕಾರ ಈ ಕೂಡಲೇ ಆಡಳಿತದಿಂದ ಕೆಳಗಿಳಿಯಬೇಕು. ನಮ್ಮ ನಾಯಕರ ಬಂಧನ ಅಕ್ಷಮ್ಯ ಎಂದು ಕೆಪಿಸಿಸಿ ಟ್ವಿಟ್ ಮಾಡಿದೆ.














