7:20 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್

03/08/2024, 17:17

ಭೀಮಣ ಪೂಜಾರ್ ಮಲಕಾರಿ ವಿಜಯಪುರ

info.reporterkarnataka@gmail.com

ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಮುಡಾ ವಿಚಾರವಾಗಿ ಹಮ್ಮಿಕೊಂಡ ಬೆಂಗಳೂರು- ಮೈಸೂರು ಪಾದಯಾತ್ರೆಗೆ ಬಗ್ಗೆ ಯತ್ನಾಳ್ ಅವರು ಲೇವಡಿ ಮಾಡಿದ್ದಾರೆ. ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆದಿದೆ. ಭ್ರಷ್ಟಾಚಾರಿಗಳ ಹೋರಾಟಕ್ಕೆ ಯಾವುದೇ ಮಹತ್ವವಿಲ್ಲ ಎಂದು ಕಿಚಾಯಿಸಿದ್ದಾರೆ.ಯಡಿಯೂರಪ್ಪ ಕುಟುಂಬ
ವಿರುದ್ಧ ಯತ್ನಾಳ್​ಎಂದಿನಂತೆ ಕಿಡಿ ಕಾರಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಲ್ಲ. ಅಂದು ಬಿ.ಎಸ್​​​​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲು ಇದೇ ವಿಜಯೇಂದ್ರ ಕಾರಣ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್​ ಸಂದರ್ಭದಲ್ಲಿ ಬಿಜೆಪಿಯ ಅವಧಿಯಲ್ಲಾದ ಹಗರಣದ ಬಗ್ಗೆ ತನಿಖೆ ನಡೆಸಲಿ. ಮೊದಲು ವಿಜಯೇಂದ್ರ ನಡೆಸಿದ ಭ್ರಷ್ಟಾಚಾರದ ಬಗ್ಗೆ ಸಿಎಂ ಹೊರಹಾಕಲಿ. ನೈತಿಕತೆ ಇದ್ದರೆ ಬಿಎಸ್​​​ವೈ ಇಂದು ಪಾದಯಾತ್ರೆ ಚಾಲನೆ ವೇಳೆ ವೇದಿಕೆ ಹತ್ತಬಾರದಿತ್ತು. ಮೊದಲು ನಿಮ್ಮ ಹಗರಣ ನೋಡಿಕೊಳ್ಳಿ ಎಂದು ಬಿಎಸ್​​ವೈ ಕುಟುಂಬದ ವಿರುದ್ಧ ಯತ್ನಾಳ್​ ಗುಡುಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು